ದೇಶದ ಅಭಿವೃದ್ಧಿಗೆ ಮೋದಿ ಪ್ರಧಾನಿಯನ್ನಾಗಿಸಲು ಎಲ್ಲರೂ ಶ್ರಮಿಸಿ
ಚಿಕ್ಕಬಳ್ಳಾಪುರ: ಭಾರತದ ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿಯನ್ನಾಗಿಸಲು ಪ್ರತಿಯೊಬ್ಬರು ಶ್ರಮಿಸಬೇಕೆಂದು ಬಿಜೆಪಿ ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕಾಂತರಾಜ್ ಕರೆ ನೀಡಿದರು. ನಗರದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಕೋಟ್ಯಂತರ ರು. ಗಳನ್ನು ಲೂಟಿ ಮಾಡುತ್ತಿರುವ ಕೇಂದ್ರ ಯುಪಿಎ ಸರ್ಕಾರದ ಭ್ರಷ್ಟಾಚಾರ, ಹಗರಣಗಳಿಂದ ಜನರು ಬೇಸತ್ತಿದ್ದಾರೆ. ಈಗ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಪರ ಜನರು ಹೆಚ್ಚಿಗೆ ಒಲವು ತೋರುತ್ತಿದ್ದಾರೆ. ಭಯೋತ್ಪಾದನೆ, ಹಗರಣ, ಭ್ರಷ್ಟಾಚಾರ, ಬಡತನ, ಹದಗೆಟ್ಟ ಆರ್ಥಿಕ ವ್ಯವಸ್ಥೆ ಸೇರಿದಂತೆ ದೇಶದ ಸಮಸ್ಯೆಗಳನ್ನು ದೂರ ಮಾಡುವ ಶಕ್ತಿ ಮೋದಿಗೆ ಮಾತ್ರ ಇದ್ದು ಈ ನಿಟ್ಟಿನಲ್ಲಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ಕೊಡಬೇಕೆಂದು ಸಲಹೆ ನೀಡಿದರು.
ಮಿಟ್ಟಹಳ್ಳಿ ಮಂಜುನಾಥ ಮಾತನಾಡಿ, ಮುಂದಿನ ತಿಂಗಳು 18 ರಿಂದ ಡಿಸೆಂಬರ್ 2 ರವರೆಗೆ ಯುವ ಜನತೆ ನೋಂದಣಿ ಅಭಿಯಾನವನ್ನು ಕೈಗೊಳ್ಳಲಾಗುತ್ತಿದ್ದು ಹೆಚ್ಚಿಗೆ ಯುವಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡುವ ಕಾರ್ಯವನ್ನು ಕೈಗೊಳ್ಳಬೇಕು. ದೇಶದಲ್ಲೆಲ್ಲಾ ಮನೆ ಮಾತಾಗಿರುವ ನರೇಂದ್ರ ಮೋದಿ ಕೈಗೊಂಡ ಅಭಿವೃದ್ಧಿ ಬಗ್ಗೆ, ದೇಶದ ಅಭಿವೃದ್ಧಿಗೆ ಅವರ ಅಗತ್ಯದ ಬಗ್ಗೆ ಜನರಿಗೆ ತಿಳಿಸಬೇಕೆಂದು ತಿಳಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ ಮಾತನಾಡಿ, ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕೆಂದು ಕೋರಿದರು. ಪ್ರದೀಪ, ನವೀನ್, ತಾಯಪ್ಪ, ಭರತ್ ರೆಡ್ಡಿ,ಅಶ್ವತ್ಥ, ಕಿರಣ್, ನಾರಾಯಣಸ್ವಾಮಿ, ಆನಂದರೆಡ್ಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

