ಕೋಲಾರ

ನಿರುದ್ಯೋಗ ನಿವಾರಣೆಗೆ ಸ್ವಯಂ ಉದ್ಯೋಗ ತರಬೇತಿ

Published On :

ಚಿಕ್ಕಬಳ್ಳಾಪುರ: ಪ್ರಸ್ತುತ ನಿರುದ್ಯೋಗ ಸಮಸ್ಯೆ ನಿವಾರಿಸುವಲ್ಲಿ ಸ್ವಯಂ ಉದ್ಯೋಗ ತರಬೇತಿ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಇಂತಹ ಕಾರ್ಯಕ್ರಮಗಳನ್ನು ಸ್ವಯಂ ಸೇವಾ ಸಂಸ್ಥೆಗಳು ಹೆಚ್ಚಿಗೆ ಹಮ್ಮಿಕೊಳ್ಳಬೇಕೆಂದು ತಾಪಂ ಅಧ್ಯಕ್ಷ ಕೃಷ್ಣಮೂರ್ತಿ ಕರೆ ನೀಡಿದರು.
ನಗರದ ಕಂದಾಯ ಭವನದಲ್ಲಿ ಕರವೇ, ಎಸ್ ಎಸ್ ಡಿಜಿಟಿಲ್ ಪ್ರಿಂಟ್ಸ್, ಕನಕಪುರದ ಸಂಜೀವಿನಿ ಫೌಂಡೇಷನ್ ಫಾರ್ ರೂರಲ್ ಆರ್ಗನೈಜೇಷನ್ ಆಯೋಜಿಸಿದ್ದ 21 ದಿನಗಳ ಉಚಿತ ಮೊಬೈಲ್ ರಿಪೇರಿ ಮತ್ತು ಬ್ಯೂಟಿ ಪಾರ್ಲರ್ ತರಬೇತಿ ಸಮಾರೋಪ ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾನ್ಯವಾಗಿ ಸ್ವಯಂ ಸೇವಾ ಸಂಸ್ಥೆಗಳು ಆರೋಗ್ಯ, ರಕ್ತದಾನ ಶಿಬಿರಗಳನ್ನು ಹೆಚ್ಚಿಗೆ ಹಮ್ಮಿಕೊಳ್ಳುತ್ತವೆ. ಇಲ್ಲವೇ ಸ್ವಚ್ಛತಾ ಕಾರ್ಯಗಳಿಗೆ ಒತ್ತು ಕೊಡುತ್ತವೆ. ಆದರೆ, ಸ್ವಯಂ ಉದ್ಯೋಗ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಕಡಿಮೆ. ಇಂದು ಉದ್ಯೋಗ ತರಬೇತಿ ಕಾರ್ಯಕ್ರಮಗಳೂ ಮುಖ್ಯವಾಗಿದ್ದು ನಗರ ಪ್ರದೇಶಗಳ ಜತೆಗೆ ಗ್ರಾಮೀಣ ಭಾಗಕ್ಕೂ ಅನುಕೂಲವಾಗುವಂತೆ, ನಿರುದ್ಯೋಗ ಸಮಸ್ಯೆ ದೂರ ಮಾಡಲು ಇಂತಹ ತರಬೇತಿ ಕಾರ್ಯಕ್ರಮಗಳನ್ನು ಹೆಚ್ಚಿಗೆ ಹಮ್ಮಿಕೊಳ್ಳಬೇಕೆಂದು ಸಲಹೆ ನೀಡಿದರು.
ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಗಂಗಾಧರ್ ಮಾತನಾಡಿ, ಇಂದು ಮೊಬೈಲ್ ಬಳಕೆ ಹೆಚ್ಚಾಗಿದೆ. ಇಂತಹ ವಾತಾವರಣದ ನಡುವೆ ಉಚಿತ ಮೊಬೈಲ್ ರಿಪೇರಿ ತರಬೇತಿ ಶಿಬಿರ ನಡೆಸಿರುವುದು ಶ್ಲಾಘನೀಯ. ಇದನ್ನು ಯುವಕರು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಮಹಿಳೆಯರ ಸಬಲೀಕರಣಕ್ಕೆ ಸ್ವಯಂ ಉದ್ಯೋಗ ತರಬೇತಿ ಪರಿಣಾಮಕಾರಿಯಾಗಿದೆ. ಮಹಿಳೆಯರು ಸ್ವಾವಲಂಬಿಗಳಾಗಲು ಶ್ರಮಿಸಬೇಕೆಂದರು.
ಸಂಜೀವಿನಿ ಫೌಂಡೇಷನ್ ಅಧ್ಯಕ್ಷ ಭರತ್ ಕುಮಾರ್ ಮಾತನಾಡಿ, ಕಳೆದ ಐದು ವರ್ಷಗಳಿಂದ ತಮ್ಮ ಸಂಸ್ಥೆ ನಿರುದ್ಯೋಗಿಗಳಿಗಾಗಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದ್ದು ಇದನ್ನು ಮುಂದವರೆಸಿಕೊಂಡು ಹೋಗುವುದಾಗಿ ತಿಳಿಸಿದರು.
ಕರವೇ ಜಿಲ್ಲಾಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್, ಅಂತಾರಾಷ್ಟೀಯ ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್, ಎಸ್. ಲಕ್ಷ್ಮಯ್ಯ, ಬ್ಯೂಟಿಷಿಯನ್ ಶಾಮಲಾ, ನಾಗೇಶ್, ರಾಜೇಂದ್ರ ಪ್ರಸಾದ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.