ಪೊಲೀಸ್ ಠಾಣೆ ಜಾಗ ಒತ್ತುವರಿ; ಮನವಿ
ಬಂಗಾರಪೇಟೆ: ಪೊಲೀಸ್ ಠಾಣೆಗೆ ಮಂಜೂರಾಗಿದ್ದ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡು ವಾಣಿಜ್ಯ ಸಂಕಿರಣ ನಿರ್ಮಿಸಿಕೊಂಡಿದ್ದು, ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದರು ಉಪಯೋಗವಾಗಿಲ್ಲ ಎಂದು ಸುಂದರಾಪಾಳ್ಯ ಗ್ರಾಮದ ರಾಮರಾವ್ ಎಂಬ ವೃದ್ಧರು ಕೋಲಾರ ಲೋಕಾಯುಕ್ತ ಡಿವೈಎಸ್ಪಿರವರಿಗೆ ದೂರು ನೀಡಿ ಸರ್ಕಾರದ ಜಾಗವನ್ನು ರಕ್ಷಣೆ ಮಾಡುವಂತೆ ಆಗ್ರಹಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿವಾರಿಸಿ ಸರ್ಕಾರ ಯೋಜನೆಗಳು ಅರ್ಹರಿಗೆ ಸುಲಭವಾಗಿ ದೊರೆಯುವಂತೆ ಮಾಡುವು ಸಲುವಾಗಿ ಕೋಲಾರ ಲೋಕಾಯುಕ್ತ ಡಿವೈಎಸ್ಪಿ ರಾಮಮೂರ್ತಿ ನೇತೃತ್ವದಲ್ಲಿ ಪೊಲೀಸರು ಸಾರ್ವಜನಿಕರಿಂದ ಅಹವಾಲು ಆಲಿಸಲು ಬುಧವಾರ ಪಟ್ಟಣದ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದ ವೇಳೆ ಸುಂದರಪಾಳ್ಯ ಗ್ರಾಮದ ರಾಮರಾವ್ ಅವರು, ಗ್ರಾಮದಲ್ಲಿ ಹಿಂದೆ ಪೊಲೀಸ್ ಠಾಣೆ ನಿರ್ಮಾಣಕ್ಕೆ ಸರ್ಕಾರ ಸರ್ವೆ ನಂ 154ರಲ್ಲಿ ಒಂದು ಎಕರೆ ಮಂಜೂರು ಮಾಡಲಾಗಿತ್ತು. ನಂತರ ಗ್ರಾಮದಲ್ಲಿ ಠಾಣೆ ಪ್ರಾರಂಭವಾಗದ ಕಾರಣ ಕೆಲವು ಪ್ರಭಾವಿ ವ್ಯಕ್ತಿಗಳು ಸುಮಾರು ಮೂರು ಕೋಟಿ ರು. ಬೆಲೆ ಬಾಳುವ ಸರ್ಕಾರಿ ಜಾಗವನ್ನು ನಕಲಿ ಖಾತೆಯನ್ನು ಪಂಚಾಯ್ತಿಯಲ್ಲಿ ಮಾಡಿಕೊಂಡು ಮಳಿಗೆಗಳನ್ನು ಕಟ್ಟಿ ಬಾಡಿಗೆಗೆ ನೀಡಿದ್ದಾರೆ.
ಈ ಬಗ್ಗೆ ಹಲವು ಬಾರಿ ಎಲ್ಲಾ ಇಲಾಖೆಗೂ ದೂರು ನೀಡಲಾಗಿದೆ. ಯಾವುದೇ ಪ್ರಯೋಜನವಾಗಿಲ್ಲ, ತನಿಖೆ ಮಾಡಿ ಸರ್ಕಾರದ ಆಸ್ತಿಯನ್ನು ರಕ್ಷಣೆ ಮಾಡಿ ಎಂದು ಲೋಕಾಯುಕ್ತರ ಮುಂದೆ ಬೇಡಿದರು. ಇದಕ್ಕೆ ಸ್ಪಂದಿಸಿದ ಲೋಕಾಯುಕ್ತರು ಸ್ಥಳದಲ್ಲೇ ಇದ್ದ ತಹಸೀಲ್ದಾರ್ ಉಷಾರನ್ನು ಪ್ರಶ್ನಿಸಿದರು. ಅವರಿಂದ ಸಕಾರಾತ್ಮಕ ಉತ್ತರ ದೊರೆಯದ ಕಾರಣ ಮುಂದಿನ ವಾರ ನಾವೇ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದರು. ನಂತರ ಮಾತನಾಡಿದ ಲೋಕಾಯುಕ್ತ ಡಿವೈಎಸ್ಪಿ ರಾಮಮೂರ್ತಿ, ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿಕೊಡಬೇಕೆಂದು ಹೇಳಿದರು. ತಹಸೀಲ್ದಾರ್ ಉಷಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

