ಕೋಲಾರ

'ಅನುದಾನ ಸಮರ್ಪಕ ಬಳಕೆಯಾಗಲಿ'

Published On :

ಚಿಕ್ಕಬಳ್ಳಾಪುರ: ಯುವ ಸಬಲೀಕರಣ ಕ್ರೀಡಾ ಇಲಾಖಾ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಾಗಾಂಭಿಕಾದೇವಿ ಬುಧವಾರ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ಸಾಧಿಸಿರುವ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ ಸರ್ಕಾರದಿಂದ ಸಿಗುತ್ತಿರುವ ಅನುದಾನ ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅಭಿವೃದ್ಧಿ ಸಾಧಿಸಲು ಅಧಿಕಾರಿಗಳು ತ್ವರಿತವಾಗಿ ಮುಂದಾಗಬೇಕೆಂದು ಸೂಚನೆ ನೀಡಿದರು.
ಆರೋಗ್ಯ, ಪಶುಪಾಲನಾ, ಕೃಷಿ, ಲೋಕೋಪಯೋಗಿ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸರ್ಕಾರದಿಂದ ತಮ್ಮ ಇಲಾಖೆಗೆ ಬಿಡುಗಡೆಯಾದ ಅನುದಾನ,ಕಾರ್ಯಕ್ರಮಗಳ ಪ್ರಗತಿ, ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಮಾಡಿರುವುದರ ಬಗ್ಗೆ ವಿವರಿಸಿದರು. ಸಮಸ್ಯೆಗಳ ಬಗ್ಗೆಯೂ ಬೆಳಕು ಚೆಲ್ಲಿ ಬಗೆಹರಿಸಲು ಮನವಿ ಮಾಡಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಾಗಾಂಭಿಕಾ ದೇವಿ, ಜಿಲ್ಲೆಯಲ್ಲಿ ಅಸಮರ್ಪಕ ಮಳೆಯಿಂದ ಬರದ ವಾತಾವರಣ ನಿರ್ಮಾಣವಾಗಿದ್ದು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಲು ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು.
ರಾಜ್ಯಾದ್ಯಂತ ಕಾಲುಬಾಯಿ ಜ್ವರ ಕಾಡುತ್ತ ಜಾನುವಾರುಗಳನ್ನು ಬಲಿ ತೆಗೆದುಕೊಂಡಿದ್ದು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ಕಾಲುಬಾಯಿ ಮಹಾಮಾರಿಗೆ ರಾಸುಗಳ ಸಾವನ್ನಪ್ಪದಿರಲು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಲು ಸೂಚಿಸಲಾಗಿದೆ. ಇನ್ನೂ ಜಿಲ್ಲೆಯಲ್ಲಿ ಮೇವಿಗೆ ಕೊರತೆಯಿಲ್ಲ ಎಂದು ತಿಳಿಸಿದರು.
ಜಿಲ್ಲಾ ಸರ್ಕಾರಿ ಆಸ್ಪತ್ರೆ ಸೇರಿದಂತೆ ಆರೋಗ್ಯ ಇಲಾಖೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ಹುದ್ದೆಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಇದನ್ನು ನಿವಾರಿಸಿ ತುರ್ತು ಆರೋಗ್ಯ ಸೇವೆ ಒದಗಿಸಲು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಕ್ರೀಡೆಗಳಿಗೂ ಪ್ರೋತ್ಸಾಹ ನೀಡುವ ಸಲುವಾಗಿ ಜಿಲ್ಲೆಯಲ್ಲಿ ಕ್ರೀಡಾ ಕ್ಲಬ್ ಹಾಗೂ ಗ್ರಂಥಾಲಯವನ್ನು ಸ್ಥಾಪಿಸಲಾಗುವುದೆಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ಹಾಜರಿದ್ದರು. ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನಗರದ ಸರ್.ಎಂ.ವಿ. ಜಿಲ್ಲಾ ಕ್ರೀಡಾಂಗಣ ಹಾಗೂ ನೂತನ ಜಿಲ್ಲಾಡಳಿತ ಭವನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.