ದಂಡಿಗಾನಹಳ್ಳಿ ಕೆರೆಯಿಂದ ಗೌರಿಬಿದನೂರಿಗೆ ನೀರು; ವಿರೋಧ
ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಚೇನಹಳ್ಳಿಯ ದಂಡಿಗಾನಹಳ್ಳಿ ಕೆರೆಯನ್ನು ಗೌರಿಬಿದನೂರು ತಾಲೂಕಿನ ಜನರಿಗಾಗಿ ಕುಡಿಯುವ ನೀರಿನ ಯೋಜನೆಗೆ ಬಳಸಿಕೊಳ್ಳಲು ಮುಂದಾಗಿರುವುದಕ್ಕೆ ವಿರೋಧವಾಗಿದೆ.
ಮಂಚೇನಹಳ್ಳಿಯಲ್ಲಿ ಸಭೆ ನಡೆಸಿದ ಸ್ಥಳೀಯ ಮುಖಂಡರು, ಅಂತರ್ಜಲ ಕುಸಿತ ಮತ್ತು ಮಳೆಯ ಕೊರತೆಯಿಂದ ಸಮಸ್ಯೆಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಗೌರಿಬಿದನೂರು ಜನರಿಗೆ ಕುಡಿಯುವ ನೀರನ್ನು ಒದಗಿಸಲು ಯೋಜನೆ ತಯಾರಿಸುತ್ತಿರುವುದು ಇಲ್ಲಿನ ಜನರಿಗೆ ತೊಂದರೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇತ್ತೀಚಿನ ವರ್ಷಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತಿದ್ದು, ಅಂತರ್ಜಲ ಬತ್ತಿ ಹೋಗಿರುವುದರಿಂದ ಇಲ್ಲಿನ ರೈತರು ಕಂಗಾಲಾಗಿದ್ದು ಈ ಪರಿಸ್ಥಿತಿಯಲ್ಲಿ ಈ ಕೆರೆಯಿಂದ ಕುಡಿಯುವ ನೀರಿನ ಯೋಜನೆ ರೂಪಿಸಿರುವುದು ಸರಿಯಲ್ಲ ಎಂದು ಮಂಚೇನಹಳ್ಳಿಯ ರಿಯಾಜ್ ಪಾಷಾ ಟೀಕಿಸಿದರು.
ದಂಡಿಗಾನಹಳ್ಳಿ ಕೆರೆಯ ನೀರಿನಿಂದ ಸುಮಾರು 300 ಎಕರೆ ಜಮೀನಿನಲ್ಲಿ ಕೃಷಿ ಕೈಗೊಳ್ಳುತ್ತಿದ್ದು, ಸುಮಾರು 15,000 ಜನರು ಈ ಕೆರೆಯ ಉಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ. ಕೆರೆಯ ಪೋಷಣೆಯಲ್ಲಿ ಮಂಚೇನಹಳ್ಳಿ ಕೆರೆ ಇದೆ. ಕೇವಲ ಮಳೆಯಾಶ್ರಿತ ಕೆರೆಯಿಂದ ಕುಡಿಯುವ ಯೋಜನೆ ಕೈಗೊಳ್ಳುತ್ತಿರುವುದರಿಂದ ಹಿಂದೆ ಸರಿಯಬೇಕೆಂದು ಒತ್ತಾಯಿಸಿದರು.
ಹೋರಾಟದ ನೇತೃತ್ವ ವಹಿಸಿದ್ದ ಪ್ರಭಾಕರ ರೆಡ್ಡಿ, ವಕೀಲ ಲಕ್ಷ್ಮೀನಾರಾಯಣ ಮಾತನಾಡಿ, ವಿಧಾನಸಭೆಯ ಉಪ ಸಭಾಪತಿ ಎನ್.ಎಚ್. ಶಿವಶಂಕರರೆಡ್ಡಿರವರು ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಕಾರ್ಯರೂಪಕ್ಕೆ ತರಲು ಪ್ರಯತ್ನಿಸದೇ ಈ ಭಾಗದ ಅಂತರ್ಜಲ ವೃದ್ಧಿಗೆ ಪೂರಕವಾಗಿರುವ ಈ ಕೆರೆಯಿಂದ ಕುಡಿಯುವ ನೀರಿನ ಯೋಜನೆಯನ್ನು ಕೈಗೊಳ್ಳುತ್ತಿರುವುದು ಹಾಸ್ಯಾಸ್ಪದವೇ ಸರಿ ಎಂದು ಟೀಕಿಸಿದರು. ಸ್ವಾತಂತ್ರ್ಯ ಹೋರಾಟಗಾರ ಸುಬ್ಬರಾವ್, ತಾಪಂ ಸದಸ್ಯ ನಾರಾಯಣಸ್ವಾಮಿ,ಶ್ರೀರಂಗಪ್ಪ, ಪಿ.ಎನ್. ಪ್ರಕಾಶ್, ಬಾಲಕೃಷ್ಣ, ಅಪ್ಪಿ, ಸುರೇಶ್, ಈಶ್ವರ್, ಮಸ್ತಾನ್, ಅಬ್ಬು, ನೌಶಾದ್, ರಮೇಶ್, ವೆಂಕಟೇಶ್, ಸೀನಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

