ಕೋಲಾರ

ಕಾಂಗ್ರೆಸ್ ಕಾರ್ಯಕರ್ತರ ವರ್ತನೆ; ಭಯಭೀತರಾದ ನಾಗರಿಕರು

Published On :

ಶಿಡ್ಲಘಟ್ಟ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಗೆ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆಗಳಿಗೆ ವೇದಿಕೆಯಾಗುವ ವಾತಾವರಣ ಕಂಡು ಬರುತ್ತಿದೆ.
ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪನವರ ಸ್ವಗ್ರಾಮ ಕಂಬದಹಳ್ಳಿ ಗ್ರಾಮದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ತೊಲಗಿಸಿ ದೇಶ ಉಳಿಸಿ ಎಂಬ ಜನಜಾಗರಣಾ ಅಭಿಯಾನದಿಂದ ಆಕ್ರೋಶಗೊಂಡ ಸಚಿವರ ಬೆಂಬಲಿಗರು ಗ್ರಾಮದಲ್ಲಿ ಕಾಂಗ್ರೆಸ್ ಹೊರತುಪಡಿಸಿ ಬೆರಾವುದೇ ಪಕ್ಷ ಚುನಾವಣೆ ಪ್ರಚಾರ ನಡೆಸಬಾರದು ಎಂದು ತಾಲೂಕು ಬಿಜೆಪಿ ಅಧ್ಯಕ್ಷರ ಮನೆಗೆ ತೆರಳಿ ಧಮಕಿ ಹಾಕಿರುವುದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಕಂಬದಹಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪನವರ ಸುಮಾರು ಹದಿನೈದು ಜನರ ಬೆಂಬಲಿಗರ ಗುಂಪು ಬಿಜೆಪಿ ತಾಲೂಕು ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡರ ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮಕಿ ಹಾಕಿದ್ದು ಪ್ರಕರಣ ಗ್ರಾಮಾಂತರ ಠಾಣೆಯ ಮೆಟ್ಟಲೇರಿದೆ. ಘಟನೆಗೆ ಸಂಬಂಧಿಸಿ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷರು ದೂರು ದಾಖಲಿಸಿರುವ ಹಿನ್ನಲೆಯಲ್ಲಿ ಕೇಂದ್ರ ಸಚಿವರ ಬೆಂಬಲಿಗರ ವರ್ತನೆ ನಾಗರಿಕರಲ್ಲಿ ಆತಂಕ ಮೂಡಿಸಿದೆ. ಇದರ ಬೆನ್ನಲ್ಲೇ ಗ್ರಾಮಾಂತರ ಠಾಣೆಯಲ್ಲಿ ಉಭಯ ಪಕ್ಷದ ಮುಖಂಡರ ಸಭೆ ನಡೆಸಿ ಮುಚ್ಚಳಿಕೆ ಬರೆದುಕೊಟ್ಟು ರಾಜಿಯಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಕಂಬದಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಪಕ್ಷವೊಂದರ ಕಾರ್ಯಕರ್ತರ ವರ್ತನೆಯಿಂದ ನಾಗರಿಕರು ಭಯಭೀತರಾಗಿದ್ದು ಕ್ಷೇತ್ರದಲ್ಲಿ ಇಂತಹ ವಾತಾವರಣ ಮರುಕಳಿಸದಿರಲು ಹಿರಿಯ ಪೊಲೀಸ್ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.