ಕೋಲಾರ

ಕುಡಿವ ನೀರಿಗೆ ಆಗ್ರಹಿಸಿ ನಗರಸಭೆ ಮುತ್ತಿಗೆ

Published On :

ಚಿಂತಾಮಣಿ: ಕುಡಿಯುವ ನೀರಿನ ವ್ಯವಸ್ಥೆ ಮಾಡದ ನಗರಸಭಾ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ವಿರುದ್ಧ ದಿಕ್ಕಾರ ಕೂಗುತ್ತಾ ನೂರಾರು ಮಹಿಳೆಯರು ಖಾಲಿ ಬಿಂದಿಗೆಗಳೊಂದಿಗೆ ನಗರಸಭೆಗೆ ನುಗ್ಗಲು ಯತ್ನಿಸಿದಾಗ ಅಧಿಕಾರಿಗಳು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪ್ರತಿಭಟನಕಾರರು ಪೊರಕೆಯಿಂದ ವಿನೂತನ ಪ್ರತಿಭಟನೆ ನಡೆಸಿದರು.
ಪಟ್ಟಣದ ಆಶ್ರಯ ಬಡಾವಣೆ ಹಾಗೂ ವೆಂಕಟಗಿರಿಕೋಟೆ ಸುತ್ತಮುತ್ತಲಿನ ನಿವಾಸಿಗಳು 4 ತಿಂಗಳಿಂದ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದರೂ ನಿರ್ಲಕ್ಷ್ಯ ತೋರಿದ ಪರಿಣಾಮ ನೂರಾರು ಮಹಿಳೆಯರು ಖಾಲಿ ಬಿಂದಿಗೆಗಳೊಂದಿಗೆ ಬೀದಿಗಿಳಿದು ಹೋರಾಟ ನಡೆಸಿದರು.
ಹಲವು ಬಾರಿ ಮೂಲ ಸೌಲಭ್ಯಗಳಿಗೆ ಆಗ್ರಹಿಸಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಫಲವಿಲ್ಲದ ಕಾರಣ ಆಶ್ರಯ ಬೀದಿಗಳಿದು ಅಧಿಕಾರಿಗಳು ವಿರುದ್ಧ ದಿಕ್ಕಾರಗಳನ್ನು ಕೂಗಿದರು.
ಮೂಲ ಸೌಲಭ್ಯದ ಕೊರತೆ: ಚಿಂತಾಮಣಿ ನಗರಸಭೆ ಚುನಾವಣೆಯ ನಂತರ ಹಲವು ಬಡಾವಣೆಗಳಲ್ಲಿ ಜನಸಾಮಾನ್ಯರಿಗೆ ಕುಡಿಯುವ ನೀರು, ಒಳಚರಂಡಿ, ಬೀದಿ ದೀಪ, ರಸ್ತೆ, ಸ್ವಚ್ಛತೆ ಸೇರಿದಂತೆ ಹಲವಾರು ಸಮಸ್ಯೆಗಳು ತಾಂಡವಾಡುತ್ತಿದ್ದರೂ ನಗರಸಭೆ ಅಧಿಕಾರಿಗಳು ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತೆ ನಡೆದುಕೊಳ್ಳುತ್ತಾ ಪ್ರತಿಷ್ಟಿತ ಬಡಾವಣೆಗಳಿಗೆ ನೀರು ಕಲ್ಪಿಸಿದ್ದಾರೆ. ಕೊಳಚೆ ಪ್ರದೇಶಗಳಿಗೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದರು.
ಪರಿಸ್ಥಿತಿ ಉದ್ರಿಕ್ತ: ಜನರಿಗೆ ಮೂಲ ಸಮಸ್ಯೆ ಕಲ್ಪಿಸುವಲ್ಲಿ ವಿಫಲರಾಗಿರುವ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶಗೊಂಡು ನೂರಾರು ಜನರು ನಗರಸಭೆ ಕಾರ್ಯಾಲಯಕ್ಕೆ ನುಗ್ಗಲು ಯತ್ನಿಸಿದಾಗ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು.
ಸಬ್‌ಇನ್ಸ್ ಪೆಕ್ಟರ್ ಮುರಳಿ ಹಾಗೂ ನಗರಸಭಾ ಆಯುಕ್ತ ಚನ್ನೇಗೌಡ ಪ್ರತಿಭಟನಕಾರರನ್ನು ಸಮಾದಾನ ಪಡಿಸಿ 2 ದಿನಗಳಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.