ಅಮೆಚ್ಯೂರ್ ಕಬಡ್ಡಿ ಸಂಸ್ಥೆಗೆ ತೃತೀಯ ಸ್ಥಾನ
ಚಿಕ್ಕಬಳ್ಳಾಪುರ: ಇದೇ ಪ್ರಥಮ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಅಮೆಚ್ಯೂರ್ ಕಬಡ್ಡಿ ಸಂಸ್ಥೆಯ ಬಾಲಕಿಯರ ತಂಡ ರಾಜ್ಯ ಮಟ್ಟದ ಜೂನಿಯರ್ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿ ತೃತೀಯ ಸ್ಥಾನ ಗಳಿಸಿದೆ ಎಂದು ರಾಜ್ಯ ಅಮೆಚ್ಯೂರ್ ಕಬಡ್ಡಿ ಸಂಸ್ಥೆಯ ಅಧ್ಯಕ್ಷ ಎಂ. ಹನುಮಂತೇಗೌಡ ತಿಳಿಸಿದ್ದಾರೆ. ಚಿತ್ರದುರ್ಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ರಾಜ್ಯ ಅಮೆಚ್ಯೂರ್ ಕಬಡ್ಡಿ ಸಂಸ್ಥೆ ಹಾಗೂ ರಾಯಭಾರಿ ಕ್ರೀಡಾ ಸಂಸ್ಥೆ ಆಶ್ರಯದಲ್ಲಿ 2ನೇ ರಾಜ್ಯಮಟ್ಟದ ಜೂನಿಯರ್ ಬಾಲಕ, ಬಾಲಕಿಯರ ಕಬಡ್ಡಿ ಚಾಂಪಿಯನ್ ಶಿಫ್ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದಲ್ಲಿ ಜಿಲ್ಲಾ ಕಬಡ್ಡಿ ತಂಡ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದೆ. ಜಿಲ್ಲಾ ಅಮೆಚ್ಯೂರ್ ಕಬಡ್ಡಿ ಸಂಸ್ಥೆಯ ವತಿಯಿಂದ 2 ತಂಡಗಳು ಭಾಗವಹಿಸಿದ್ದು ಬಾಲಕಿಯರ ತಂಡ 3 ನೇ ಸ್ಥಾನಕ್ಕೆ ನಡೆದ ಅಂತಿಮ ಪಂದ್ಯದಲ್ಲಿ ಬೆಂಗಳೂರು ಗ್ರಾಮಾಂತರ ವಿರುದ್ಧ 24 ಅಂಕಗಳ ಅಂತರದಲ್ಲಿ ಜಯಗಳಿಸಿತು. ತಂಡದ ಕೆ. ವೀಣಾ ಚಾಂಪಿಯನ್ ಶಿಪ್‌ನಲ್ಲಿ ಅತ್ಯುತ್ತಮ ಹಿಡಿತಗಾರ್ಥಿ (ಬೆಸ್ಟ್ ಕ್ಯಾಚರ್) ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಇದೇ ಸಂದರ್ಭದಲ್ಲಿ ಕಳೆದ2 ವಾರಗಳ ಹಿಂದೆಯಷ್ಟೆ ಚಿಕ್ಕಬಳ್ಳಾಪುರ ಜಿಲ್ಲಾ ಅಮೆಚ್ಯೂರ್ ಕಬಡ್ಡಿ ಸಂಸ್ಥೆ ನೂತನವಾಗಿ ಅಸ್ಥಿತ್ವಕ್ಕೆ ಬಂದಿದ್ದು ರಾಜ್ಯ ಮಟ್ಟದಲ್ಲಿ ನಡೆದ ಪಂದ್ಯಾವಳಿಯಲ್ಲಿ ಜಿಲ್ಲೆಯಿಂದ ಪ್ರತಿನಿಧಿಸಿದ್ದ ಈ ಸಂಸ್ಥೆಯ ತಂಡ ಮೊದಲ ಬಾರಿಗೇ ತೃತೀಯ ಸ್ಥಾನಗಳಿಸಿರುವುದು ಜಿಲ್ಲೆಗೆ ಸಂದ ಗೌರವವಾಗಿದೆ ಎಂದು ನವೀನ್ ಕಿರಣ್ ಶ್ಲಾಘಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

