'ಗ್ರಾಮೀಣರಿಗೆ ಸ್ವಚ್ಛತೆಯ ಅರಿವು ಮೂಡಿಸಿ'
ಕ.ಪ್ರ.ವಾರ್ತೆ ಕೋಲಾರ ಅ. 25
ರಾಷ್ಟ್ರೀಯ ಸೇವಾ ಯೋಜನಾ ಶಿಬಿರಗಳ ಮೂಲಕ ವಿದ್ಯಾರ್ಥಿಗಳಿಗೆ ಶ್ರಮದಾನ ಹಾಗೂ ಗ್ರಾಮೀಣ ಸ್ವಚ್ಛತೆಯ ಮಹತ್ವ ತಿಳಿಸಿಕೊಡುವ ಅಗತ್ಯವಿದೆ ಎಂದು ಶಾಸಕ ವರ್ತೂರು ಪ್ರಕಾಶ್ ಅಭಿಪ್ರಾಯಪಟ್ಟರು.
ತಾಲೂಕಿನ ಧನಮಟ್ನಹಳ್ಳಿಯಲ್ಲಿ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಎನ್.ಎಸ್.ಎಸ್ ಘಟಕದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಗ್ರಾಮಗಳಲ್ಲಿ ಪ್ರತಿ ಕೆಲಸಕ್ಕೂ ಸರ್ಕಾರದ ಕಡೆ ಬೊಟ್ಟು ಮಾಡುವ ಮೂಲಕ ಗ್ರಾಮೀಣ ಶ್ರಮದಾನದ ಮಹತ್ವವನ್ನೇ ಮರೆಯಲಾಗುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎಸ್. ವೆಂಕಟಸ್ವಾಮಿ ಅವರು ಮಾತನಾಡಿ, ಕಾಲೇಜು ವಿದ್ಯಾರ್ಥಿಗಳು ಶಿಬಿರದ ಮೂಲಕ ಒಂದೊಂದು ಹಳ್ಳಿಯನ್ನು ಸ್ವಚ್ಛಗೊಳಿಸುವುದರ ಜತೆಗೆ ಮುಂದಿನ ದಿನಗಳಲ್ಲಿ ಆ ಹಳ್ಳಿಯ ಜನತೆಯೇ ಶ್ರಮದಾನಕ್ಕಿಳಿಯುವ ವಾತಾವರಣ ಮೂಡಿಸುವ ಕೆಲಸ ಮಾಡಬೇಕೆಂದರು. ಶಿಬಿರಗಳಲ್ಲಿ ಗ್ರಾಮೀಣ ಸ್ವಚ್ಛತೆ, ಆರೋಗ್ಯದ ಕುರಿತು ಅರಿವು ಮೂಡಿಸಲಾಗುತ್ತಿದೆ, 7 ದಿನಗಳ ಈ ಶಿಬಿರದಲ್ಲಿ ಗ್ರಾಮದ ಸಂಪೂರ್ಣ ಸ್ವಚ್ಛತೆ, ಮಧ್ಯಾಹ್ನ ಉಪನ್ಯಾಸ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ಕಸಾಪ ಜಿಲ್ಲಾಧ್ಯಕ್ಷ ಜೆ.ಜಿ. ನಾಗರಾಜ್ ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಗ್ರಾಮದಲ್ಲಿ ಸುಂದರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರಲ್ಲೂ ಗಿಡಮರ ಬೆಳೆಸುವ ಅರಿವು ಮೂಡಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಶಿಬಿರಾಧಿಕಾರಿ ಎಚ್.ಆರ್. ಶ್ರೀನಿವಾಸ್ ನೇತೃತ್ವದಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯ ವೆಂಕಟೇಶಮೂರ್ತಿ, ಹನುಮಂತಪ್ಪ, ಆಂಜಿನಪ್ಪ, ರಾಜು, ಕಾಲೇಜಿನ ಉಪನ್ಯಾಸಕ ಎ. ಮಂಜುನಾಥ್, ಎನ್. ರಾಮಚಂದ್ರಪ್ಪ, ಆರ್. ಮಂಜುನಾಥ್, ಎನ್.ಕೆ. ಮಂಜುನಾಥ್, ಎನ್. ಮುನಿಕೃಷ್ಣಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

