ಕೋಲಾರ

ಮಾಹಿತಿ ಇಲ್ಲದ ಅಧಿಕಾರಿಗಳು ತರಾಟೆ ತೆಗೆದುಕೊಂಡ ಅಧ್ಯಕ್ಷರು

Published On :

ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡದ ಅಧಿಕಾರಿಗಳು
ಕ.ಪ್ರ.ವಾರ್ತೆ ಬಾಗೇಪಲ್ಲಿ ಅ.25

ಪದವಿ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ 250 ವಿದ್ಯಾರ್ಥಿಗಳಿಗೆ ಊಟಕ್ಕೆ ಕೇವಲ 50 ತಟ್ಟೆಗಳು ಇರುವುದಾಗಿ ತಿಳಿಸಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯನ್ನು ಜಿಪಂ ಅಧ್ಯಕ್ಷ ಚಿನ್ನಪ್ಪ ತರಾಟೆಗೆ ತೆಗೆದುಕೊಂಡರು.
250 ವಿದ್ಯಾರ್ಥಿಗಳಿಗೆ ಕೇವಲ 50 ತಟ್ಟೆಗಳನ್ನು ಮಾತ್ರ ನೀಡಿದರೆ ಹೇಗೆ ಸರ್ಕಾರದಿಂದ ಬರುತ್ತಿರುವ ಅನುದಾನ ಎಲ್ಲಿಗೆ ಹೋಗುತ್ತಿದೆ ಈ ತಾಲೂಕು ಆಂಧ್ರಪ್ರದೇಶಕ್ಕೆ ಸೇರಿದೆಯೇ ಎಂದು ಅಕ್ರೋಶ ವ್ಯಕ್ತಪಡಿಸಿದರು.
ತಾಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕು ಮಟ್ಟದ ಬಹುತೇಕ ಅಧಿಕಾರಿಗಳು ಇಲಾಖಾ ವಾರು ಕೇಳಿದ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಲಿಲ್ಲ. ಇದರಿಂದ ಕುಪಿತರಾದ ಅಧ್ಯಕ್ಷರು, ನೀವು ಸಭೆಗೆ ಬಂದಾಗ ಸರಿಯಾದ ಮಾಹಿತಿ ನೀಡಬೇಕು, ಬರೆದುಕೊಂಡ ಬಂದ ಮಾಹಿತಿ ಅವಶ್ಯಕತೆಯಿಲ್ಲ, ಇಲಾಖೆಗೆ ಸಂಬಂಧಿಸಿ ನಾವು  ಕೇಳಿದ ಪ್ರಶ್ನೆಗಳಿಗೆ ತಕ್ಕ ಮಾಹಿತಿ ನೀಡಿ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ನಂತರ ತಾಲೂಕಿನಲ್ಲಿ ಕಾಲುಬಾಯಿ ಜ್ವರದಿಂದ ಎಷ್ಟು ಜಾನುವಾರುಗಳು ಮೃತಪಟ್ಟಿವೆ, ಅವುಗಳಲ್ಲಿ ಹಸು, ಕರುಗಳು ಸೇರಿದಂತೆ ವಿವಿಧ ಜಾನುವಾರುಗಳು ಎಷ್ಟು ಎನ್ನುವುದರ ಬಗ್ಗೆ ಮಾಹಿತಿ ನೀಡುವಂತೆ ಜಿಪಂ ಅಧ್ಯಕ್ಷರು ಕೇಳಿದ ಪ್ರಶ್ನೆಗೆ ಪಶು ವೈದ್ಯಾಧಿಕಾರಿ ಮಾಹಿತಿ ನೀಡಲು ತಡಬಡಾಯಿಸಿದರು.
ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ 11 ಮಂದಿ ವೈದ್ಯರ ಬದಲಿಗೆ ಕೇವಲ 3 ಮಂದಿ ವೈದ್ಯರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು. ಜಿಪಂ ಸದಸ್ಯರಾದ ಅಮರಾವತಿ ಕೃಷ್ಣಪ್ಪ, ನಾರಾಯಣಮ್ಮ ತಾಪಂ ಉಪಾಧ್ಯಕ್ಷ ಎಂ. ಶಂಕರರೆಡ್ಡಿ, ಸ್ಥಾಯಿ ಸಮಿತಿ ಅಧ್ಯಕ್ಷ ನಾರಾಯಣ್ ನಾಯ್ಕ, ಜಿಲ್ಲಾ ನೋಡಲ್ ಅಧಿಕಾರಿ ಚಂದ್ರಪ್ಪ, ತಾಪಂ ಕಾರ್ಯ ನಿರ್ವಹಣಾಧಿಕಾರಿ ಸಿ. ಶ್ರೀನಿವಾಸ್, ಪಂಚಾಯತ್ ಇಲಾಖೆ ಎಇಇ ಪಿ.ವಿ. ನಾಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ವೆಂಕಟೇಶ್, ಸಿಡಿಪಿಒ ಲಕ್ಷ್ಮೀದೇವಮ್ಮ, ಬೆಸ್ಕಾಂ ಇಲಾಖೆ ಬಾಲಾಜಿ, ತಾಲೂಕು ಆರೋಗ್ಯಾಧಿಕಾರಿ  ಜಲಾನಯನ ಇಲಾಖೆ ಪ್ರಸನ್ನ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.