ಕೋಲಾರ

'ಯೋಗಾಭ್ಯಾಸದಿಂದ ಮಾನಸಿಕ ನೆಮ್ಮದಿ'

Published On :

ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಅ. 25
ವ್ಯಾಯಾಮ ಮತ್ತು ಯೋಗಾಭ್ಯಾಸದಿಂದ ಮಾನಸಿಕ ನೆಮ್ಮದಿ ಪಡೆಯುವುದರ ಜತೆಗೆ ದೈಹಿಕ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದೆಂದು ಮಿಂಟೋ ಕಣ್ಣಿನ ಆಸ್ಪತ್ರೆ ನಿರ್ದೇಶಕ ಶಿವಪ್ರಸಾದ್ರೆಡ್ಡಿ ತಿಳಿಸಿದರು.
ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಂಗಳೂರು ಉತ್ತರ ಲಯನ್ಸ್ ಕ್ಲಬ್, ಮಿಂಟೋ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಜಿಲ್ಲಾ ಮತ್ತು ತಾಲೂಕು ಸರ್ಕಾರಿ ಆಸ್ಪತ್ರೆ ಆಶ್ರಯದಲ್ಲಿ ಆಯೋಜಿಸಿದ್ದ ಮಧುಮೇಹ ರೋಗಿಗಳ ಕಣ್ಣಿನ ತಪಾಸಣೆ ಕಾರ್ಯಕ್ರಮದಲ್ಲಿ ಮಾತನಾಡಿ, ದೇಹದಲ್ಲಿ ಕಣ್ಣುಗಳು ಪ್ರಧಾನವಾದುದು. ಸಮಸ್ಯೆಗಳು ಕಂಡು ಬಂದ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಮೂಲ ಅನುರಾಧ, ಆರೋಗ್ಯ ಕಾಪಾಡಿಕೊಳ್ಳುವುದಕ್ಕೆ ಪ್ರತಿಯೂಬ್ಬರು ಒತ್ತು ಕೊಡಬೇಕು ಎಂದರು. ಸಕ್ಕರೆ ಕಾಯಿಲೆಯನ್ನು ಮುನ್ನೆಚ್ಚರಿಕೆ ಕ್ರಮಗಳಿಂದ ನಿಯಂತ್ರಿಸಬಹುದು. ಕಾಯಿಲೆಯಿಂದಾಗುವ ಸಮಸ್ಯೆಗಳಿಂದ ಮುಕ್ತರಾಗಬಹುದೆಂದು ತಿಳಿಸಿದರು. 94 ಮಂದಿ ಮಧುಮೇಹಿ ರೋಗಿಗಳ ಕಣ್ಣಿನ ತಪಾಸಣೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗವರ್ನರ್ ಆರ್. ಕುಮಾರ್, ಎನ್. ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಎಚ್.ವಿ. ರಂಗಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕಿ ಎಂ. ಮಂಜುಳ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.