ಕೋಲಾರ

ಇಂದು ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸಭೆ

Published On :

ಮಾಲೂರು: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರು ಶನಿವಾರ ಪಟ್ಟಣದ ವೈಟ್ ಗಾರ್ಡನ್ನಲ್ಲಿ ಬೆಂಬಲಿಗರ ಸಭೆ ಆಯೋಜಿಸಿದ್ದು, ತಾಲೂಕಿನ ಎಲ್ಲ ಅಭಿಮಾನಿಗಳು, ಸ್ತ್ರಿಶಕ್ತಿ ಗುಂಪಿನ ಮಹಿಳೆಯರು ಭಾಗವಹಿಸಬೇಕೆಂದು ಜಿಪಂ ಸದಸ್ಯ ರಾಮಸ್ವಾಮಿ ರೆಡ್ಡಿ ಹೇಳಿದರು. ಪತ್ರಿಕಾಗೋಷ್ಠಿಠಿಯಲ್ಲಿ ಮಾತನಾಡಿ, ವಿಧಾನ ಸಭೆ ಚುನಾವಣೆ ನಂತರ ಹಲವು ಕಾರಣಗಳಿಂದ ರಾಜಕೀಯದಿಂದ ವಿಮುಖರಾಗಿದ್ದ ಕೃಷ್ಣಯ್ಯ ಶೆಟ್ಟಿ,  ಕಾರ್ಯಕರ್ತರ ಮನವಿಗೆ ಸ್ಪಂದಿಸಿ ಶನಿವಾರ ಮಾಲೂರಿಗೆ ಬರಲಿದ್ದು, ಬೆಂಬಲಿಗರ ಸಭೆ ಕರೆದಿದ್ದಾರೆ ಎಂದರು. ತಾಪಂ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ತಾಲೂಕು ರಾಜಕೀಯಕ್ಕೆ ನಾಯಕರಾಗಿರುವ ಕೃಷ್ಣಯ್ಯ ಶೆಟ್ಟಿರವರ ಮರು ಆಗಮನ ಕಾರ್ಯಕರ್ತರಲ್ಲಿ ಹುಮ್ಮಸ್ಸು ತಂದಿದ್ದು,ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಿರುತ್ತೇವೆ ಎಂದರು. ಬಿಜೆಪಿ ಮುಖಂಡ ನೂಟವೆ ವೆಂಕಟೇಶ್ ಗೌಡ ಮಾತನಾಡಿದರು. ರಾಜೇನಹಳ್ಳಿ ಜೋಗಪ್ಪ, ರಾಜೇಶ್, ತಿಮ್ಮನಾಯಕನಹಳ್ಳಿ ನಾರಾಯಣಸ್ವಾಮಿ ಇದ್ದರು.

ಪರಿಹಾರ ಭರವಸೆ
ಚಿಂತಾಮಣಿ:
ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಲು ಆಗ್ರಹಿಸಿ ಸರ್ಕಾರದ ಮೇಲೆ ಒತ್ತಡ ಹೇರಿದಾಗ ಮುಖ್ಯಮಂತ್ರಿಗಳು ಶೀಘ್ರ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಉಪನ್ಯಾಸಕ ಬೊಮ್ಮೇಕಲ್ಲು ವೆಂಕಟೇಶ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿ, ಕಳೆದ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸಂಬಂಧಪಟ್ಟ ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ. ಎಸ್ಎಫ್ಐ ಜಿಲ್ಲಾ ಸಂಚಾಲಕ ಕುಂದಲಗುರ್ಕಿ ಮುನೇಂದ್ರ ಮಾತನಾಡಿದರು. ಅತಿಥಿ ಉಪನ್ಯಾಸಕರಾದ ಮಣಿ.ಆರ್, ಶಿಲ್ಪ, ಆಂಜನಪ್ಪ, ಗುರುಪ್ರಸಾದ್, ಶ್ರೀನಿವಾಸ್, ನಿಜಾಮ್, ಎನ್.ಶ್ರೀನಿವಾಸ್, ರಮೇಶ್, ಹಾದಿಗೆರೆ ಶ್ರೀನಿವಾಸ್, ಕೆ.ಎಲ್. ಸತೀಶ್, ಸಿ. ಜಯಚಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.