ಜೀತಪದ್ಧತಿ ನಿರ್ಮೂಲನೆಗೆ ಒತ್ತಾಯಿಸಿ ಪ್ರತಿಭಟನೆ
ಕೋಲಾರ: ರಾಜ್ಯದಲ್ಲಿ ಜೀತ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು, ಬಿಡುಗಡೆಯಾಗಿರುವ ಜೀತದಾಳುಗಳಿಗೆ ಪುನರ್ವಸತಿ ಕಲ್ಪಿಸಬೇಕೆಂದು ಒತ್ತಾಯಿಸಿ ನಗರದಲ್ಲಿ ಶುಕ್ರವಾರ ಜೀತ ವಿಮುಕ್ತಿ ಕರ್ನಾಟಕ(ಜೀವಿಕ) ಮತ್ತು ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.
ಪ್ರತಿ ವರ್ಷ ಅಕ್ಟೋಬರ್ 25 ರಂದು ಜೀತ ಪದ್ಧತಿ ವಿರುದ್ಧ ಜನಜಾಗೃತಿಯನ್ನು ಹಮ್ಮಿಕೊಳ್ಳಲಾಗುತ್ತಿದ್ದು ಜೀತ ಪದ್ಧತಿಯ ನಿರ್ಮೂಲನೆಗಾಗಿ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದರೂ ಜೀತದಾಳುಗಳ ಪರಿಸ್ಥಿತಿ ಸುಧಾರಣೆಯಾಗುತ್ತಿಲ್ಲವೆಂದು ಪ್ರತಿಭಟನಾಕಾರರು ದೂರಿದರು.
ಜೀತಪದ್ಧತಿಯಿಂದ ಮುಕ್ತರಾಗಿರುವ ಜನರಿಗೆ ಪುನರ್ವಸತಿ ಕಲ್ಪಿಸಬೇಕೆಂದು 2008ರಿಂದ ಇವರೆಗೆ ಸುಮಾರು 450ಕ್ಕೂ ಹೆಚ್ಚು ಮಂದಿ ಅರ್ಜಿಗಳನ್ನು ಸಲ್ಲಿಸಿದ್ದರೂ ಯಾವುದೇ ಪರಿಹಾರ ನೀಡಿಲ್ಲ, ಅನೇಕ ಕಡೆ ಈಗಲೂ ಜೀತಪದ್ಧತಿ ನಡೆಯುತ್ತಿದ್ದರೂ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲವೆಂದು ಆರೋಪಿದರು.
ಜೀತಮುಕ್ತರಿಗೆ 20 ಸಾವಿರ ಪರಿಹಾರ ಬದಲು 2 ಲಕ್ಷ ನೀಡಬೇಕು, ಪ್ರತಿ ಜೀತ ವಿಮುಕ್ತ ಕುಟುಂಬಗಳಿಗೆ ಅಂತ್ಯೋದಯ ಪಡಿತರ ಚೀಟಿ, ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಜಾಗೃತಿ ಸಮಿತಿ ರಚನೆ, ಪೊಲೀಸ್ ಠಾಣೆಗಳಲ್ಲಿ ಜೀತದಾಳು ಬಗ್ಗೆ ಚರ್ಚೆ, ಪ್ರತಿ ಜೀತ ಮುಕ್ತರಿಗೆ 4 ಎಕರೆ ಭೂಮಿ, 6ರಿಂದ 14ವರ್ಷದ ಎಲ್ಲಾ ಮಕ್ಕಳಿಗೂ ಕಡ್ಡಾಯ ಶಿಕ್ಷಣ ಹಾಗೂ ತನಿಖಾ ತಂಡಗಳಲ್ಲಿ ಜೀವಿಕ ಕಾರ್ಯಕರ್ತರನ್ನು ಸೇರಿಸಿಕೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಡಿ.ಕೆ. ರವಿಯವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜೀವಿಕ ಜಿಲ್ಲಾ ಸಂಚಾಲಕ ರಾಮಚಂದ್ರಪ್ಪ, ವಕೀಲ ಬಿ. ವೆಂಕಟಾಚಲಪತಿ, ಸೂಲಿಕುಂಟೆ ಆನಂದ್, ಹುಣಸನಹಳ್ಳಿ ಎನ್. ವೆಂಕಟೇಶ್, ಎಸ್.ಪ್ರಭಾವತಿ, ವಿಜಯಕುಮಾರಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

