ಕೋಲಾರ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

Published On :

ಚಿಕ್ಕಬಳ್ಳಾಪುರ: ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಶುಕ್ರವಾರ ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದೆ.
ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ದಲಿತ ಮುಖಂಡರು, ದಲಿತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರಕೂಗಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘಟನೆ ರಾಜ್ಯ ಮುಖಂಡ ಕೆ.ಸಿ. ರಾಜಾಕಾಂತ್ ಮಾತನಾಡಿ, ಸರ್ಕಾರದಿಂದ ದಲಿತರಿಗಾಗಿ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆಯಾದರೂ ಅರ್ಹರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಈ ಬಗ್ಗೆ ಅನೇಕ ಬಾರಿ ಹೋರಾಟ, ಪ್ರತಿಭಟನೆ ನಡೆಸುತ್ತಿದ್ದರೂ ಪರಿಹಾರ ಕಾಣುತ್ತಿಲ್ಲ. ಇದಕ್ಕೆ ಅಧಿಕಾರಿಗಳ ದಲಿತ ವಿರೋಧಿ ನೀತಿಯೇ ಕಾರಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ದಲಿತರ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಸಭೆ ನಡೆಸುತ್ತಿದ್ದರೂ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ. ಕಾಟಾಚಾರಕ್ಕೆ ದಲಿತರ ಸಮಸ್ಯೆ ಆಲಿಸುತ್ತಿದ್ದು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನೈತಿಕ ಸಂಬಂಧ ಹಿನ್ನೆಲೆ; ವ್ಯಕ್ತಿ ಕೊಲೆ
ಚಿಂತಾಮಣಿ;
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಪೊದೆಯಲ್ಲಿ ಬಿಸಾಕಿರುವ ಘಟನೆ ಕೆಂಚಾರ್ಲಹಳ್ಳಿ ಠಾಣೆ ವ್ಯಾಪ್ತಿಯ ಮಾಸನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ತಾಲೂಕಿನ ಕೋರ್ಲಪರ್ತಿ ಗ್ರಾಪಂನ ಮಾಸನಹಳ್ಳಿ ಗ್ರಾಮದ ನಾರಾಯಣಸ್ವಾಮಿ(38) ಕೊಲೆಯಾಗಿರುವ ವ್ಯಕ್ತಿ. ತನ್ನ ಮೊದಲ ಪತ್ನಿಯಾದ ಶಿವಮ್ಮನಿಗೆ ಇಬ್ಬರು ಮಕ್ಕಳಿದ್ದು, ಬಾಗೇಪಲ್ಲಿ ತಾಲೂಕಿನ ಗೋವಿಂದಪಲ್ಲಿ ಗ್ರಾಮದ ಮಂಜುಳ ಎಂಬಾಕೆಯೊಂದಿಗೆ ಕಳೆದ ಹಲವು ದಿನಗಳಿಂದ ನಾರಾಯಣಸ್ವಾಮಿ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಕಳೆದ 2 ದಿನಗಳಿಂದ ಹಣಕಾಸಿನ ಲೇವಾದೇವಿ ವಿಷಯವಾಗಿ ನಾರಾಯಣಸ್ವಾಮಿ ಮತ್ತು ಅನೈತಿಕ ಹೊಂದಿದ್ದ ಎನ್ನಲಾಗಿದ್ದ ಮಂಜುಳ ನಡುವೆ ಜಗಳ ನಡೆಯುತ್ತಿತ್ತು ಎಂದು ಪೊಲೀಸರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಗುರುವಾರ ರಾತ್ರಿ ಒಂಟಿಯಾಗಿ ಬರುತ್ತಿದ್ದ ನಾರಾಯಣಸ್ವಾಮಿಯನ್ನು ಅಡ್ಡಗಟ್ಟಿದ ಮಂಜುಳ ಸಹಚರರು ಕುತ್ತಿಗೆಗೆ ಹಗ್ಗದಿಂದ ಬಿಗಿದು ಕೊಲೆ ಮಾಡಿ ಮಾಸನಹಳ್ಳಿ ಗ್ರಾಮದ ಪೊದೆಯಲ್ಲಿ ಶವ ಬಿಸಾಕಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೊಲೆ ಮಾಡಿದ 3 ಜನ ಆರೋಪಿಗಳು ತಲೆಮರಿಸಿಕೊಂಡಿದ್ದಾರೆ. ಘಟಣಾ ಸ್ಥಳಕ್ಕೆ ಡಿವೈಎಸ್ಪಿ ಸಣ್ಣತಿಮ್ಮಪ್ಪ ಮತ್ತು ವೃತ್ತ ನಿರೀಕ್ಷಕ ವೆಂಕಟೇಶಮೂರ್ತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.