ಕೋಲಾರ

'ಕ್ಷಯ ರೋಗ ಮುಕ್ತ ಸಮಾಜ ನಿರ್ಮಿಸೋಣ'

Published On :

ಗೌರಿಬಿದನೂರು: ಕ್ಷಯರೋಗ ಮುಕ್ತ ಸಮಾಜ ನಿರ್ಮಿಸಲು ಸಮುದಾಯದ ಜನರು ಸಹಕರಿಸಬೇಕೆಂದು ನಾಮಗೊಂಡ್ಲು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ರಘುನಾಥ್ ಕರೆ ನೀಡಿದರು. ನಾಮಗೊಂಡ್ಲು ಪಿಹೆಚ್ಸಿ ವ್ಯಾಪ್ತಿಯ ಗುಂಡ್ಲಹಳ್ಳಿಯಲ್ಲಿ ಏರ್ಪಡಿಸಿದ್ದ ಕ್ಷಯರೋಗದ ಬಗ್ಗೆ ಅರಿವಿನ ಕಾರ್ಯಕ್ರಮದಲ್ಲಿ ಮಾತನಾಡಿ, ಕ್ಷಯ ರೋಗದಿಂದ ಭಾರತದಲ್ಲಿ ಪ್ರತಿ 5 ನಿಮಿಷಗಳಿಗೆ 3ಮಂದಿ ಸಾವನ್ನಪ್ಪುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಈರೋಗ್ಯದ ಬಗ್ಗೆ ಅರಿವಿನ ಕೊರತೆ ಇದೆ ಎಂದರು. ಈ ಕಾರ್ಯಕ್ರಮದಲ್ಲಿ 9ಮಂದಿಗೆ ಕಫ ಪರೀಕ್ಷೆ ನಿರ್ವಹಿಸಿದಾಗ ಒಬ್ಬರಿಗೆ ಈ ರೋಗಲಕ್ಷಣ ಕಂಡು ಬಂದು ಚಿಕಿತ್ಸೆ ಪ್ರಾರಂಭಿಸಲಾಯಿತು. ಉಮಾ ಸಿಸ್ಟರ್, ನರಸಮ್ಮ, ರಾಜಶೇಖರ್ ನಾರಾಯಣ ಸ್ವಾಮಿ, ಶ್ರೀನಿವಾಸ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.