ಕೋಲಾರ

ಆಸ್ತಿ ನೋಂದಣಿ ಕಾರ್ಯ ವಿಳಂಬ ಖಂಡಿಸಿ ಪ್ರತಿಭಟನೆ

Published On :

ಬಂಗಾರಪೇಟೆ: ಗ್ರಾಮಾಂತರ ಪ್ರದೇಶಗಳಲ್ಲಿ ಆಸ್ತಿ ನೋಂದಣಿ ಮಾಡಲು ಉಪ ನೋಂದಣಿ ಅಧಿಕಾರಿಗಳು ವಿಳಂಬ ಮಾಡುತ್ತಿರುವುದರಿಂದ ಸರ್ಕಾರಕ್ಕೆ ಲಕ್ಷಾಂತರ ರು. ನಷ್ಟವಾಗುತ್ತಿದ್ದು ಕೂಡಲೇ ನೋಂದಣಿ ಕಾರ್ಯಕ್ಕೆ ಮರು ಚಾಲನೆ ನೀಡಬೇಕೆಂದು ಆಗ್ರಹಿಸಿ ದಲಿತ ಸಿಂಹ ಸೇನೆ ಮುಖಂಡರು ಇಲ್ಲಿನ ಉಪ ನೋಂದಣಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಸೂಲಿಕುಂಟೆ ಆನಂದ್ ಮಾತನಾಡಿ ಕಳೆದ ಎರಡು ತಿಂಗಳಿಂದ ಗ್ರಾಮಾಂತರ ಭಾಗದಲ್ಲಿ ಯಾವುದೇ ಆಸ್ತಿಗಳು, ಮನೆಗಳು, ನಿವೇಶನಗಳನ್ನು ನೋಂದಣಿ ಮಾಡಿಕೊಳ್ಳದಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೆ ಇದರಿಂದ ಸರ್ಕಾರದ ಬೊಕ್ಕಸಕ್ಕೂ ನಷ್ಟವಾಗುತ್ತಿದೆ, ಸರ್ಕಾರ ಇತ್ತೀಚೆಗೆ ಇ ಸ್ವತ್ತು ಎಂಬ ಹೊಸ ನೀತಿ ಜಾರಿಗೆ ತಂದಿದ್ದು ಇದು ಬೆಂಗಳೂರು ಮತ್ತು ಮಾಲೂರು ತಾಲೂಕಿನಲ್ಲಿ ಕಾರ್ಯಾರಂಭವಾಗಿದೆ. ಆದರೆ ತಾಲೂಕಿನಲ್ಲಿ ಮಾತ್ರ ಇನ್ನೂ ಜಾರಿಗೊಂಡಿಲ್ಲ ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಸರಿ, ಕೆಲವು ಮಂದಿ ಈಗಾಗಲೇ ತಮ್ಮ ಆಸ್ತಿಗಳನ್ನು ಬೇರೆಯವರಿಗೆ ಮಾರಾಟದ ಅಗ್ರಿಮೆಂಟ್ ಮಾಡಿಸಿಕೊಂಡು ಅದರ ಅವದಿ ಮುಗಿದಿರುವುದರಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಕೂಡಲೆ ಮರು ನೋಂದಣಿ ಆರಂಭಿಸುವಂತೆ ಆಗ್ರಹಿಸಿ ಎರಡು ಗಂಟೆಗಳ ಕಾಲ ಪ್ರತಿಭಟನೆ ಮಾಡಿದರಿಂದ ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯಲಿಲ್ಲ. ನಂತರ ಉಪ ನೋಂದಣಾಧಿಕಾರಿ ವಾರದೊಳಗೆ ಸಮಸ್ಯೆಗಳನ್ನು ನಿವಾರಿಸಿ ಮತ್ತೆ ನೋಂದಣಿ ಆರಂಭಿಸುವ ಭರವಸೆ ನಂತರ ಪ್ರತಿಭಟನೆ ಕೈ ಬಿಟ್ಟರು.
ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ಹುಣಸನಹಳ್ಳಿ ರಮೇಶ್, ಪಿಳ್ಳಪ್ಪ, ಮುನಿಸ್ವಾಮಿ, ರಾಧಮ್ಮ, ಮಂಜುನಾಥ್, ಮಂಜುಳ, ಮುನಿರತ್ನಮ್ಮ ಮತ್ತು ಗಜಲಕ್ಷ್ಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.