ಕೋಲಾರ

ಚಿಕ್ಕಬಳ್ಳಾಪುರ ನಗರದಲ್ಲೂ ನಗರ ಸಾರಿಗೆ: ಶಾಸಕರಿಂದ ಚಾಲನೆ

Published On :

ಚಿಕ್ಕಬಳ್ಳಾಪುರ: ಪ್ರಯಾಣಿಕರ ಆಶಯದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಜಿಲ್ಲಾ ಕೇಂದ್ರಕ್ಕೆ 5 ನೂತನ ನಗರ ಸಾರಿಗೆ ಬಸ್ಸುಗಳ ಸಂಚಾರ ಸೌಲಭ್ಯವನ್ನು ಒದಗಿಸಿದೆ. ನಗರದ ಹಳೆಯ ಬಸ್‌ನಿಲ್ದಾಣದಲ್ಲಿ ಶಾಸಕ ಕೆ. ಸುಧಾಕರ್ ಹಸಿರು ಬಾವುಟ ತೋರಿಸುವ ಮೂಲಕ ನಗರ ಬಸ್ ಸಂಚಾರಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಹೊಸದಾಗಿ ಪ್ರಾರಂಭವಾಗಿರುವ ನಗರ ಸಾರಿಗೆ ಬಸ್ ಸಂಚಾರದಿಂದ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಫ್ಯಾಕ್ಟರಿಗಳಿಗೆ ತೆರಳುವ ನೌಕರರಿಗೆ ತುಂಬಾ ಅನುಕೂಲವಾಗಲಿದೆ ಎಂದು ಶಾಸಕ ಡಾ.ಕೆ. ಸುಧಾಕರ್ ತಿಳಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಿಗೆ ಬಸ್ ಸೌಲಭ್ಯದ ಕೊರತೆಯ ಬಗ್ಗೆ ತಮ್ಮ ಗಮನ ಸೆಳೆಯುತ್ತ ಬಂದಿದ್ದು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಾವು ಚರ್ಚೆ ನಡೆಸಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸುವಂತೆ ಕೋರಿದ್ದು ಇದೀಗ ನಗರ ಬಸ್ ಸಂಚಾರ ವ್ಯವಸ್ಥೆಯನ್ನು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಒದಗಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಥಮವಾಗಿ ನಾಯನಹಳ್ಳಿಯಿಂದ ತಿಪ್ಪೇನಹಳ್ಳಿ,ನಂದಿ ಕ್ರಾಸ್‌ನಿಂದ ಚಿಕ್ಕಬಳ್ಳಾಪುರಕ್ಕೆ ಸಂಚರಿಸಲಿರುವ 5 ಬಸ್‌ಗಳಿಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನು 10 ಬಸ್‌ಗಳು ಸಂಚಾರ ಆರಂಭಿಸಲಿವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಾಶ್  ಮುಂತಾದವರು ಉಪಸ್ಥಿತರಿದ್ದರು.


ಬಸ್ ಸಂಚಾರ ಎಲ್ಲಿಂದ ಎಲ್ಲಿಗೆ?
ಕ.ರಾ.ರ.ಸಾ.ನಿಗಮದ ಚಿಕ್ಕಬಳ್ಳಾಪುರ ವಿಭಾಗದಿಂದ ನೂತನ ನಗರ ಸಂಚಾರಿ 5 ಬಸ್‌ಗಳು ಚಿಕ್ಕಬಳ್ಳಾಪುರ-ಪಟ್ರೇನಹಳ್ಳಿ-ತಿಪ್ಪೇನಹಳ್ಳಿ, ಚಿಕ್ಕಬಳ್ಳಾಪುರ-ನಂದಿಕ್ರಾಸ್ ಮತ್ತು ಚಿಕ್ಕಬಳ್ಳಾಪುರ-ದೇವನಹಳ್ಳಿ ಮಾರ್ಗವಾಗಿ ಸಂಚರಿಸಲಿವೆ.
   ಪ್ರತಿದಿನ ಬೆಳಿಗ್ಗೆ 7 ಗಂಟೆಗೆ ಬಸ್ ಸಂಚಾರ ಪ್ರಾರಂಭವಾಗಲಿದ್ದು ಸಂಜೆ 7.15 ಗಂಟೆಯವರೆಗೂ ಬಸ್ ಸೌಲಭ್ಯ ಸಿಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.