ಟೆಂಪೋಪಲ್ಟಿ; ಚಾಲಕನಿಗೆ ಗಾಯ
ಶಿಡ್ಲಘಟ್ಟ: ಎಚ್.ಕ್ರಾಸ್‌ನ ಸೃಷ್ಟಿ ಆಸ್ಪತ್ರೆ ಬಳಿ ಟೆಂಪೋ ಆಯತಪ್ಪಿ ಪಲ್ಟಿ ಹೊಡೆದ ಪರಿಣಾಮ ಚಾಲಕನಿಗೆ ಗಂಬೀರ ಗಾಯಗಳಾಗಿರುವ ಘಟನೆ ನಡೆದಿದೆ.
ನಂದಿಕ್ರಾಸ್‌ನಿಂದ ಚೆನೈಗೆ ತರಕಾರಿ ಹಾಕಿಕೊಂಡು ಹೋಗುತ್ತಿದ್ದಾಗ ಎದುರು ಬಂದ ಬೈಕನ್ನು ತಪ್ಪಿಸಲು ಹೋಗಿ ರಸ್ತೆ ಬದಿಯಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಟೆಂಪೊ ಚಾಲಕ ರಮೇಶ್(35)ಗೆ ಗಂಭೀರ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪ್ರಕರಣವನ್ನು ಗ್ರಾಮಾಂತರ ಠಾಣೆಯಲ್ಲಿ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ.
ಈಜಲು ಹೋಗಿ ವಿದ್ಯಾರ್ಥಿ ಸಾವು
ಟೇಕಲ್: ಸಮೀಪದ ಈಶ್ವರನ ಕೆರೆಯಲ್ಲಿ ಬೆಂಗಳೂರಿನ ಹಲಸೂರು ಬಳಿಯ ಆರ್‌ಬಿಎಎನ್‌ಎಂಎಸ್ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಅಜಿತ್ (14) ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಬೆಂಗಳೂರಿನ ಹಲಸೂರಿನ ಎಂ.ವಿ. ಗಾರ್ಡನ್ ನಿವಾಸಿಯಾದ ಸೆಲ್ವರಾಜ್ ಎಂಬವರ ಮಗನಾದ ಅಜಿತ್ ಗೆಳೆಯರೊಂದಿಗೆ ಈಜಲು ಹೋಗಿದ್ದಾಗ ಘಟನೆ ನಡೆದಿದೆ. ಮಾಸ್ತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

