'ಯುವಕರಿಂದ ದೇಶದ ಪ್ರಗತಿ'
ಗೌರಿಬಿದನೂರು: ಜಾಗತಿಕ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಯುವ ಪೀಳಿಗೆ ಶಕ್ತಿಯಿಂದ 2025ರ ವೇಳೆಗೆ ವಿಶ್ವದಲ್ಲಿ ಕೈಗಾರಿಕ ಕ್ಷೇತ್ರದಲ್ಲಿ ಮೊದಲ ಸ್ಥಾನ ದೊರಕುವಲ್ಲಿ ಸಂಶಯವಿಲ್ಲವೆಂದು ವಿಧಾನಸಭಾ ಉಪಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ಭವಿಷ್ಯ ನುಡಿದರು. ಪಟ್ಟಣದ ಕೋಟೆ ಆವರಣದ ಉದ್ಯೋಗ ಮತ್ತು ತರಬೇತಿ ಇಲಾಖೆ ಮತ್ತು ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ) ನೂತನ ಕಟ್ಟಡ ನಿರ್ಮಾಣ ಕಾರ್ಯಕ್ರಮದಲ್ಲಿ ಮಾತನಾಡಿ, ತರಬೇತಿ ಕೇಂದ್ರದ ಕೊಠಡಿಗಳು ವಿದ್ಯಾರ್ಥಿಗಳ ಪಾಲಿಗೆ ವರದಾನವಾಗಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿರುವುದು ಗಮನಾರ್ಹ ಸಂಗತಿ ಎಂದರು. ಬರುವ ಶೈಕ್ಷಣಿಕ ವರ್ಷದಲ್ಲಿ ಪಾಲಿಟೆಕ್ನಿಕ್ ಶಾಲೆಗೆ ಇಡುಗೂರು ರಸ್ತೆಯಲ್ಲಿ 5 ಎಕರೆ ಜಮೀನು ಮಂಜೂರಾಗಿದೆ. ಇದರ ಉಪಯೋಗ ತಾಲೂಕಿನ ವಿಧ್ಯಾರ್ಥಿಗಳು ಉಪಯೋಗಿಸಿಕೊಳ್ಳಲು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಪಜಾತಿ, ಪಪಂಗಡದವರಿಗೆ ಸುಮಾರು 12,000 ರುಪಾಯಿ ಬೆಲೆ ಬಾಳುವ ಉಪಕರಣಗಳನ್ನು ಉಚಿತವಾಗಿ ವಿತರಿಸಿದರು. ಜಿಪಂ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ಪುರಸಭೆ ಸದಸ್ಯ ಜಿ. ಬಾಲಾಜಿ, ನರಸಿಂಹಮೂರ್ತಿ, ವಿ. ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಕೆ. ಸತ್ತೀಶ್, ಕಾಂತರಾಜು ಇದ್ದರು.
ಇಂದು ಕಲಾವೈಭವ
ಕೋಲಾರ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ನಗರದ ಟಿ. ಚನ್ನಯ್ಯರಂಗ ಮಂದಿರದಲ್ಲಿ ಅ.29ರಿಂದ 31ರವರೆಗೆ ಮೂರು ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ ಕಲಾ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಚಿವೆ ಉಮಾಶ್ರೀ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಭಾಗವಹಿಸುವರು, ಶಾಸಕ ವರ್ತೂರ್ ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆಂದು ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ವಿ. ನಾಚೇಗೌಡ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

