ಕೈಗಾರಿಕಾ ಪ್ರದೇಶಕ್ಕೆ 14 ತಿಂಗಳಲ್ಲಿ ನೀರಿನ ವ್ಯವಸ್ಥೆ: ಸಿದ್ದರಾಮಯ್ಯ ಭರವಸೆ
ಕೋಲಾರ: ಜಿಲ್ಲೆಯ ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನೀರಿನ ಸಮಸ್ಯೆ ನಿವಾರಣೆಗಾಗಿ ಇನ್ನೊಂದು ತಿಂಗಳಲ್ಲಿ ಯೋಜನೆಗೆ ಆದೇಶ ಹೊರಡಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಅವರು ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸ್ಕಾನಿಯಾ ವಾಣಿಜ್ಯ ವಾಹನಗಳ ತಯಾರಿಕಾ ಸಂಸ್ಥೆಯಲ್ಲಿ 250 ಕೋಟಿ ರು.ಗಳ ಪ್ರಾಥಮಿಕ ಬಂಡವಾಳದೊಂದಿಗೆ ಸ್ಥಾಪಿಸಿರುವ ಘಟಕವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿ, ಕೈಗಾರಿಕೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತಿದೆ. ಅಗತ್ಯ ಮೂಲ ಸೌಕರ್ಯಗಳು ಇದ್ದಾಗ ಮಾತ್ರ ಕೈಗಾರಿಕೆಗಳ ಬೆಳವಣಿಗೆ ಹೆಚ್ಚುತ್ತದೆ. ಹಾಗಾಗಿ ನಮ್ಮ ಸರ್ಕಾರ ಮೂಲ ಸೌಕರ್ಯಗಳ ಕಡೆ ಹೆಚ್ಚು ಗಮನ ನೀಡುತ್ತಿದೆ ಎಂದರು.
ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ನೀರಿನ ಸೌಲಭ್ಯ ಬೇಕೆಂಬ ಬೇಡಿಕೆ ಸರ್ಕಾರದ ಮುಂದಿರುವುದರಿಂದ ಉದ್ಯಮಿಗಳ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಇಲ್ಲಿನ ಕೈಗಾರಿಕೆಗಳಿಗೆ ನೀರು ಒದಗಿಸಲು ಮುಂದಿನ ತಿಂಗಳಲ್ಲಿ ಯೋಜನೆಯೊಂದಕ್ಕೆ ಆದೇಶ ಹೊರಡಿಸಿ ಕನಿಷ್ಠ 14 ತಿಂಗಳಲ್ಲಿ ನೀರು ಪೂರೈಸಲಾಗುವುದೆಂದು ತಿಳಿಸಿದರಲ್ಲದೆ, ಈ ಸಂಬಂಧ ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಳ್ಳಬೇಕೆಂದು ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

