ದೇಶ ಸಂರಕ್ಷಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ'
ಕೆಜಿಎಫ್: ಭಾರತವನ್ನು ಸಂರಕ್ಷಿಸಲು ಮತ್ತು ದೇಶದಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಇಂದಿನ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾದದ್ದು ಎಂದು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರವಿರೆಡ್ಡಿ ಹೇಳಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕರಡುಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಒಂದ ುವಾರದ ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಅದೇ ರೀತಿ ದೇಶವನ್ನು ರಕ್ಷಿಸಲು ಗಡಿ ಭಾಗದಲ್ಲಿ ಹಗಲು ರಾತ್ರಿ ಎನ್ನದೆ ಶತ್ರುಗಳೊಂದಿಗೆ ನಿರಂತರವಾಗಿ ಹೋರಾಡುತ್ತಿರುವ ನಮ್ಮ ಸೈನಿಕರ ಸೇವೆ ಶ್ಲಾಘನೀಯವಾಗಿದ್ದು ಅವರಲ್ಲಿ ಇನ್ನಷ್ಟು ಧೈರ್ಯ ಮತ್ತು ಶಕ್ತಿಯನ್ನು ನೀಡಲು ಇಂದಿನ ಯುವಕರು ಮತ್ತು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕರೆ ನೀಡಿದರು. ರಾಷ್ಟ್ರೀಯ ಸೇವೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಮುಖವಾಗಿ ಶಿಸ್ತು ಹಾಗೂ ಉತಮ ನಡತೆಯನ್ನು ಕಲಿಸಿಕೊಡುತ್ತದೆ ಅಲ್ಲದೆ ಇಂತಹ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಹಳ್ಳಿಗಾಡುಗಳಲ್ಲಿ ಗ್ರಾಮವನ್ನು ಸ್ವಚ್ಛಗೊಳಿಸಿ ಪರಿಸರವನ್ನು ಸಂರಕ್ಷಿಸುವ ಎನ್ಎಸ್ಎಸ್ ವಿದ್ಯಾರ್ಥಿಗಳ ಮುಂದಿನ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಮತ್ತು ಸಮಾಜದಲ್ಲಿ ಗೌರವವನ್ನು ತಂದುಕೊಡುತ್ತದೆ.
ಆದ್ದರಿಂದ ಈ ದೇಶವನ್ನು ಆಡಳಿತ ನಡೆಸಲು ಮತ್ತು ನಮ್ಮ ರಾಷ್ಟ್ರವನ್ನು ರಕ್ಷಿಸಲು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಉತ್ತಮ ವ್ಯಕ್ತಿಯನ್ನು ಗುರುತಿಸಿ ಚುನಾವಣೆಯಲ್ಲಿ ಆಯ್ಕೆ ಮಾಡುವ ಜವಾಬ್ದಾರಿ ಯುವಕರ ಮತ್ತು ವಿದ್ಯಾರ್ಥಿಗಳ ಮೇಲಿದೆ ಎಂದರು.
ಮುಕ್ತಾಯ ಸಮಾರಂಭ ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ಶಿಬಿರಾಧಿಕಾರಿ ಜಿ. ಪ್ರಭಾಕರ್, ಶಿಬಿರದ ರೂವಾರಿಗಳಾದ ರಘುರಾಮರೆಡ್ಡಿ, ಹರಿನಾಥರೆಡ್ಡಿ, ನಾರಾಯಣಚಾರಿ, ನೀಲಕಂಠ ರೆಡ್ಡಿ, ಜಯರಾಮರೆಡ್ಡಿ, ಸೇರಿದಂತೆ ಇತರೆ ಶಿಕ್ಷಕರು ಗ್ರಾಮದ ಮುಖಂಡರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

