ಕೋಲಾರ

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಸರ್ಕಾರ ಭರವಸೆ

Published On :

ಕ.ಪ್ರ. ವಾರ್ತೆ, ಕೋಲಾರ, ಅ.30
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ರಾಜ್ಯ ಸರ್ಕಾರ ಭರವಸೆ ನೀಡಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗನಾಳ ಮುನಿಯಪ್ಪ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತೀಚೆಗೆ ಒಕ್ಕೂಟದ ಮುಖಂಡರು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಜೊತೆ ಸಮಸ್ಯೆಗಳ ಕುರಿತು ಚರ್ಚಿಸಿದಾಗ, ಕಳೆದ 2012-13 ನೇ ಸಾಲಿನ  ಮಾರ್ಚ್, ಏಪ್ರಿಲ್ ಬಾಕಿ ವೇತನವನ್ನು ಬಿಡುಗಡೆ ಮಾಡಿರುವ ಬಗ್ಗೆ ಅಧಿಕೃತ ಪತ್ರ ನೀಡಿದ್ದಾರೆ  ಮತ್ತು 2013-14 ನೇ ಸಾಲಿನ ಜುಲೈಯಿಂದ ಅಕ್ಟೋಬರ್ ತನಕ 54 ಕೋಟಿ  ರು. ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿರುವುದು ಅತಿಥಿ ಉಪನ್ಯಾಸಕರ ಪರವಾಗಿ ಹೋರಾಡಿದ ಒಕ್ಕೂಟಕ್ಕೆ ಸಂದ ಜಯವಾಗಿದೆ ಎಂದು ತಿಳಿಸಿದ್ದಾರೆ.
ಈಗ ನೀಡುತ್ತಿರುವ ಮಾಸಿಕ 8 ರಿಂದ 10 ರು. ವೇತನವನ್ನು ಕನಿಷ್ಠ 15 ರಿಂದ 16 ಸಾವಿರಕ್ಕೆ ಹೆಚ್ಚಿಸಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಸಚಿವ ದೇಶಪಾಂಡೆ ನಿಯೋಗಕ್ಕೆ ವಿವರಿಸಿದ್ದಾರೆ.
 ಸದ್ಯಕ್ಕೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಲು ಸಾಧ್ಯವಿಲ್ಲವೆಂದು ಇದನ್ನು ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕಾಗಿರುವುದರಿಂದ ಕಾಲಾವಕಾಶ ಕೋರಿದ್ದಾರೆಂದು ತಿಳಿಸಿದ್ದಾರೆ.
ಪ್ರತಿ ತಿಂಗಳು ವೇತನ ವಿತರಿಸಲು 1,3,5 ನೇ ಸೆಮಿಸ್ಟರ್ ಪರೀಕ್ಷೆಗಳು ಮುಗಿದ ನಂತರ ಡಿಸೆಂಬರ್ ಮಾಹೆಯಿಂದ ಕೊಡಲು ಈಗಾಗಲೇ ಇಲಾಖೆಗೆ ಸೂಚಿಸಲಾಗಿದ್ದು ಪ್ರಮುಖ 5 ಬೇಡಿಕೆಗಳ ಪೈಕಿ ಮೂರು ಬೇಡಿಕೆ ಈಡೇಸಿರುವ ಸರ್ಕಾರ ಉಳಿದ ಬೇಡಿಕೆಗಳನ್ನು ಈಡೇರಿಸದಿದ್ದರೆ  ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಒಕ್ಕೂಟದ ರಾಜ್ಯ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ನಾಗನಾಳ ಮುನಿಯಪ್ಪ, ಕೋಲಾರ ಜಿಲ್ಲಾಧ್ಯಕ್ಷ ಚಂಜಿಮಲೆ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಸಿ.ಎಂ. ನಾಗಮಣಿ, ಉಪಾಧ್ಯಕ್ಷ ಅರಿಕೇರಿ ಎಂ. ಮುನಿರಾಜು, ನೂರ್ ಅಹಮದ್, ಶಶಿ, ಹ್ಯಾಡ್ಲಿ ನಾಗರಾಜ್, ಕೆ.ಟಿ. ನಾರಾಯಣಸ್ವಾಮಿ ಮುಂತಾದವರು ನಿಯೋಗದಲ್ಲಿರುವರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.