ಕೋಲಾರ

ಅತಿಥಿ ಉಪನ್ಯಾಸಕರ ಸಮಾವೇಶ ಇಂದು

Published On :

ಕೋಲಾರ: ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರ ಜಿಲ್ಲಾ ಸಮಾವೇಶವನ್ನು ಅ.31 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಸರ್ಕಾರಿ ಬಾಲಕರ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ. ಸಮಾವೇಶವನ್ನು ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಗೌರವಾಧ್ಯಕ್ಷ ಬಿ. ರಾಜಶೇಖರಮೂರ್ತಿ ಉದ್ಘಾಟಿಸಲಿದ್ದು, ನಿವೃತ್ತ ಪ್ರಾಧ್ಯಾಪಕ ಎ.ವಿ. ರೆಡ್ಡಿ, ಎನ್.ಶ್ರೀನಿವಾಸಚಾರ್, ಬಿ.ವಿ. ಸಂಪಂಗಿ, ಬಿ.ಎನ್. ಅಮರಾವತಿ ಭಾಗವಹಿಸಲಿದ್ದು, ಆರ್. ಚೌಡರೆಡ್ಡಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆಂದು ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ವಿಜಯಕೃಷ್ಣ ತಿಳಿಸಿದ್ದಾರೆ.
ಇಂದು ಜಿಲ್ಲೆಗೆ ಗೃಹ ಸಚಿವರ ಭೇಟಿ
ಕೋಲಾರ: ರಾಜ್ಯ ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಕೋಲಾರಕ್ಕೆ ಆಗಮಿಸುವ ಸಚಿವರು ಜಿಲ್ಲಾ ಕಾಂಗ್ರೆಸ್ ಭವನ ವೀಕ್ಷಣೆ ಮಾಡಿ ನಂತರ ಜಿಲ್ಲಾ ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕೋಲಾರ ಮತ್ತು ಕೆಜಿಎಫ್ ಪೊಲೀಸ್ ವಲಯ ವ್ಯಾಪ್ತಿಯಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು.
ಇಂದು ಜಿ.ಪಂ ಸಾಮಾನ್ಯ ಸಭೆ
ಕೋಲಾರ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿ.ಪಂ ಅಧ್ಯಕ್ಷ ತೂಪಲ್ಲಿ ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ಜಿ.ಪಂ ಸಾಮಾನ್ಯ ಸಭೆಯನ್ನು ಗುರುವಾರ ಬೆಳಿಗ್ಗೆ 11 ಗಂಟೆಗೆ ಕರೆಯಲಾಗಿದೆ.
ಮತದಾರರ ಪಟ್ಟಿ ಪರಿಷ್ಕರಣೆ
ಶಿಡ್ಲಘಟ್ಟ: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಪ್ರಾರಂಭಿಸಲಾಗಿದೆ ಎಂದು ತಹಸೀಲ್ದಾರ್ ಗ್ರೇಡ್-2 ರಮೇಶ್ ಹಾಗೂ ಚುನಾವಣೆ ಶಾಖೆಯ ಶಿರಸ್ತೆದಾರ ಪ್ರಕಾಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 01-01-2014 ಕ್ಕೆ 18 ವರ್ಷಗಳು ತುಂಬುವ ಮತದಾರರು ತಮ್ಮ ಸಮೀಪದ ಮತಗಟ್ಟೆಯ ಕೇಂದ್ರಗಳಲ್ಲಿರುವ ನಿರ್ಧಿಷ್ಟ ಅಧಿಕಾರಿಗಳಿಗೆ ಸೂಕ್ತ ದಾಖಲಾತಿಗಳೊಂದಿಗೆ ನಿಗದಿತ ನಮೂನೆಯಲ್ಲಿ ದಿನಾಂಕ 29.11.2013 ರೊಳಗೆ ಸಲ್ಲಿಸುವಂತೆ ಅಧಿಕಾರಿಗಳು ಕೋರಿದ್ದಾರೆ. ರಜಾದಿನಗಳಾಗಿದ್ದರೂ ಆಕ್ಷೇಪಣಾ ಅರ್ಜಿಗಳನ್ನು ಸ್ವೀಕಾರ ಮಾಡಲಾಗುತ್ತದೆ, ಹೊಸದಾಗಿ ಸೇರ್ಪಡೆಯಾಗುವವರು, ತಿದ್ದುಪಡಿಗಳು, ಸ್ಥಳ ಬದಲಾವಣೆ, ಕ್ಷೇತ್ರ ಬದಲಾವಣೆಗಳಿಗೂ ಅರ್ಜಿ ನಮೂನೆಗಳನ್ನು ಸ್ವೀಕರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.