ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ಕೆರೆ ನಿರ್ಮಾಣ
ಕೋಲಾರ: ರಾಷ್ಟ್ರೀಯ ಸೇವಾ ಯೋಜನೆಯಡಿ ನಗರದ ಸರ್ಕಾರಿ ಬಾಲಕರ ಪಿಯು ಕಾಲೇಜಿನ ವಿದ್ಯಾರ್ಥಿಗಳು ತಾಲೂಕಿನ ಧನಮಟ್ನಹಳ್ಳಿಯ ಹನುಮನ ಬೆಟ್ಟದಲ್ಲಿ ಕೆರೆ ನಿರ್ಮಾಣ ಮಾಡಿ ಅಂತರ್ಜಲ ವೃದ್ಧಿಗೆ ಶ್ರಮಿಸಿದ್ದಾರೆ.
ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಆಯೋಜಿಸಿದ್ದ ಶಿಬಿರದಲ್ಲಿ ಗ್ರಾಮದಲ್ಲಿ ಶ್ರಮದಾನ ನಡೆಸಿದ ವಿದ್ಯಾರ್ಥಿಗಳು ನಂತರ ಬೆಟ್ಟದಲ್ಲಿ ಹರಿಯುವ ಮಳೆ ನೀರು ಸಂಗ್ರಹಣೆಗಾಗಿ ಸಣ್ಣ ಕೆರೆಯನ್ನು ನಿರ್ಮಿಸಿ ಗಮನ ಸೆಳೆದಿದ್ದಾರೆ. ಗ್ರಾಪಂ ಸದಸ್ಯ ವೆಂಕಟೇಶ ಮೂರ್ತಿ ವಿದ್ಯಾರ್ಥಿಗಳ ಜೊತೆಗೂಡಿ ಕೆರೆ ನಿರ್ಮಾಣ ಕಾರ್ಯಕ್ಕೆ ಸಹಕರಿಸಿದ್ದಾರೆ. ಶಿಬಿರದ ನೇತೃತ್ವವನ್ನು ಕಾಲೇಜಿನ ಪ್ರಾಂಶುಪಾಲ ಎಸ್. ವೆಂಕಟಸ್ವಾಮಿ ವಹಿಸಿದ್ದು, ವಿದ್ಯಾರ್ಥಿಗಳಿಗೆ ಶ್ರಮದಾನದ ಮಹತ್ವ ಮತ್ತು ಕೆರೆ ನಿರ್ಮಾಣದಿಂದಾಗಿ ಬೆಟ್ಟದಲ್ಲಿನ ಪ್ರಾಣಿ ಪಕ್ಷಿಗಳಿಗೆ ನೀರಿನ ತಾಣವಾಗಿರುವ ಕುರಿತು ಸಂತಸ ವ್ಯಕ್ತಪಡಿಸಿದರು.
ಏಳು ದಿನಗಳ ಶಿಬಿರದಲ್ಲಿ ಚರಂಡಿ, ರಸ್ತೆ ಸ್ವಚ್ಛತೆ, ಗಿಡಗಳನ್ನು ನೆಟ್ಟಿದ್ದು, ಪಾರ್ಥೇನಿಯಂ ನಾಶ, ಗ್ರಾಮೀಣ ಸ್ವಚ್ಛತೆ, ಆರೋಗ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿದರು. ಶಿಬಿರಾಧಿಕಾರಿ ಎಚ್.ಆರ್. ಶ್ರೀನಿವಾಸ್, ಸಹಾಯಕ ಶಿಬಿರಾಧಿಕಾರಿ ಎನ್. ರಾಮಚಂದ್ರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗ್ರಾಮದ ಶ್ರಮದಾನದಲ್ಲಿ ಪಾಲ್ಗೊಂಡಿದ್ದರು. ಕಸಾಪ ಜಿಲ್ಲಾಧ್ಯಕ್ಷ ಜೆ.ಜಿ. ನಾಗರಾಜ್, ಗ್ರಾಮದ ಗೋಪಾಲ್, ಆಂಜಿನಪ್ಪ, ಕಾಲೇಜಿನ ಉಪನ್ಯಾಸಕ ಎ. ಮಂಜುನಾಥ್, ಎನ್. ಮುನಿಕೃಷ್ಣಪ್ಪ, ಬಾಬು ಮತ್ತಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

