ಕೋಲಾರ

ಸಮರ್ಪಕ ಬಸ್ ಸಂಚಾರಕ್ಕೆ ಒತ್ತಾಯಿಸಿ ರಸ್ತೆತಡೆ

Published On :

ಗುಡಿಬಂಡೆ: ತಾಲೂಕಿನಲ್ಲಿ ಸಾರಿಗೆ ಸಂಪರ್ಕ ತೀವ್ರ ಹದಗೆಟ್ಟಿದ್ದು, ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಯಕರ್ನಾಟಕ ಮತ್ತು  ಎಬಿವಿಪಿ ಕಾರ್ಯಕರ್ತರು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿದರು.
ಪಟ್ಟಣ ಸೇರಿದಂತೆ ತಾಲೂಕಿನ ಹಲವಾರು ಗ್ರಾಮಗಳಿಗೆ ಸಂಚರಿಸುತ್ತಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು ಸಮಯಕ್ಕೆ ಬಾರದೇ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ವೇಳೆಗೆ ಸರಿಯಾಗಿ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಕಚೇರಿ ಆಸ್ಪೆತ್ರೆ ಮುಂತಾದ ಕಡೆ ಕಾರ್ಯ ನಿಮಿತ್ತ ತೆರಳುವ ಸಾರ್ವಜನಿಕರು  ಬಸ್ಸಿಗಾಗಿ ಗಂಟೆಗಟ್ಟಲೇ ಕಾದು ಕೂರುವ ಪರಿಸ್ಥಿತಿ ಗ್ರಾಮಗಳಲ್ಲಿದೆ. ಇದೊಂದು ಕಡೆಯಾದರೇ ಮತ್ತೊಂದೆಡೆ ಆಗೊಮ್ಮೆ ಹೀಗೊಮ್ಮೆ ವೇಳೆ ತಪ್ಪಿ ಬರುವ ಬಸ್ಸುಗಳು ಸುಸ್ಥಿತಿಯಲ್ಲಿರದೇ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಸಂಸ್ಥೆಯ ಡಿಪೋಗಳಲ್ಲಿ ಕೆಲಸ ನಿರ್ವಹಿಸುವ ಬಸ್ಸುಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ವಾಹನಗಳನ್ನು ಕಾಲ ಕಾಲಕ್ಕೆ ತಪಾಸಣೆ ಹಾಗೂ ಸ್ವಚ್ಛಗೊಳಿಸುವಲ್ಲಿ ಉದಾಸೀನ ತೋರುತ್ತಿದ್ದಾರೆ. ಇನ್ನು ಬಸ್ಪಾಸ್ ಪಡೆದು ಪ್ರಯಾಣಿಸುವ ವಿದ್ಯಾರ್ಥಿಗಳನ್ನು ಕಂಡರೆ ಕೆಲ ನಿರ್ವಾಹಕರು ಬಸ್ಸುಗಳನ್ನು ನಿಲ್ಲಿಸದೇ ಹೋಗುತ್ತಿದ್ದಾರೆ. ಮೇಲ್ಕಂಡ ಸಮಸ್ಯೆಗಳ ನಿವಾರಣೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾಗಿ ಜಯಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ತಿಮ್ಮಾರೆಡ್ಡಿ, ಸದಸ್ಯರಾದ ಲಕ್ಷ್ಮೀಪತಿ, ಗಂಗಿರೆಡ್ಡಿ, ನಂಜಪ್ಪ, ಗಣೇಶ್, ಎಬಿವಿಪಿ ಸಂಘಟನೆಯ ಅಂಬರೀಷ, ಗಣೇಶ್ ಸೇರಿದಂತೆ ಹಲವು ವಿದ್ಯಾರ್ಥಿಗಳು ತಿಳಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.