ಕೋಲಾರ

ಬೇಡಿಕೆಗಳ ಈಡೇರಿಕೆಗೆ ಕ್ರಮದ ಭರವಸೆ

Published On :

ಚಿಂತಾಮಣಿ: ದಲಿತರ ಬೇಡಿಕೆ ಈಡೇರಿಸಲು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಕಾನೂನಿನಡಿ ಸಿಗುವ ಸವಲತ್ತುಗಳನ್ನು ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಕಳೆದ 6 ದಿನಗಳಿಂದ ದಲಿತ ಸಂಘರ್ಷ ಸಮಿತಿ ಜಿಲ್ಲಾ ಹಾಗೂ ತಾಲೂಕು ಶಾಖೆಯಿಂದ ಅನಿರ್ಧಿಷ್ಟ ಧರಣಿ ಸ್ಥಳಕ್ಕೆ ಆಗಮಿಸಿ ದಲಿತ ಮುಖಂಡರ ಜೊತೆ ಮಾತುಕತೆ ನಡೆಸಿ ನಂತರ ಮಾತನಾಡಿದರು.
ಶೀಘ್ರವೇ ಸಂಬಂಧಪಟ್ಟ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ನ್ಯಾಯ ಒದಗಿಸಿಕೊಡಲು ಪ್ರಯತ್ನಿಸುತ್ತೇನೆಂದರು. ನಂತರ ಮಾತನಾಡಿದ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಜಿ. ನಾರಾಯಣಸ್ವಾಮಿ, ದಲಿತ ಕಾಲೋನಿಗಳಲ್ಲಿ ಮೂಲ ಸಮಸ್ಯೆಗಳು ತಾಂಡವಾಡುತ್ತಿದ್ದರು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಕ್ರಮ ತೆಗೆದುಕೊಳ್ಳದೇ ಪಕ್ಷಪಾತ ದೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು. ನಂತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.
ನೂತನ ತಾಲೂಕು ದಂಡಾಧಿಕಾರಿಗಳಾದ ಕೆ.ಟಿ. ಕೃಷ್ಣಸ್ವಾಮಿ, ನಗರಸಭಾ ಸದಸ್ಯರಾದ ಅಬ್ಬುಗುಂಡು ಶ್ರೀನಿವಾಸರೆಡ್ಡಿ, ಪ್ರಕಾಶ್, ನಟರಾಜ್, ಶ್ರೀರಾಮಪ್ಪ, ಸಾದಪ್ಪ, ವೈ. ರಾಮನ್ನ, ಶ್ರೀರಂಗಪ್ಪ, ವಿ. ಅಮರ್, ಬೀಡಾ ಶ್ರೀನಿವಾಸ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.