ನನ್ನ ಇಲಾಖೆಯಲ್ಲಿ ಬೇರೆಯವರು ಹಸ್ತಕ್ಷೇಪ ಮಾಡಿದರೆ ಸಚಿವ ಸ್ಥಾನ ತೊರೆಯುವೆ: ಜಾರ್ಜ್
ಕನ್ನಡಪ್ರಭ ವಾರ್ತೆ, ಕೋಲಾರ,ಅ.31
ಇದುವರೆವಿಗೂ ಮುಖ್ಯಮಂತ್ರಿ ಸೇರಿದಂತೆ ಬೇರೆ ಯಾರೂ ಗೃಹ ಇಲಾಖೆಯ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಒಂದು ವೇಳೆ ನನ್ನ ಇಲಾಖೆಯಲ್ಲಿ ಯಾರಾದರೂ ಹಸ್ತಕ್ಷೇಪ ಮಾಡಿದಲ್ಲಿ ಇಲ್ಲವೇ ಒತ್ತಡ ತರುವುದಾಗಲಿ ಮಾಡಿದಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ಹೊರ ಬರುತ್ತೇನೆಂದು ಗೃಹ ಸಚಿವ ಕೆ.ಜೆ. ಜಾರ್ಜ್ ಖಡಕ್ ಆಗಿ ಹೇಳಿದರು.
ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕೋಲಾರ ಮತ್ತು ಕೆಜಿಎಫ್ ಪೊಲೀಸ್ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ವರ್ಗಾವಣೆ ಇಲ್ಲವೇ ಇಲಾಖೆಯ ಆಡಳಿತ ವಿಚಾರದಲ್ಲಿ ಯಾರೊಬ್ಬರು ಹಸ್ತಕ್ಷೇಪ ಮಾಡಿಲ್ಲ, ಒತ್ತಡಗಳನ್ನು ತಂದು ನನ್ನಿಂದ ಕೆಲಸ ಮಾಡಿಸಿಕೊಳ್ಳುವುದಕ್ಕೂ ಆಗಲ್ಲ. ಕಾನೂನು ಪ್ರಕಾರವೇ ಕೆಲಸ ನಿರ್ವಹಿಸುತ್ತೇನೆ. ಒಂದು ವೇಳೆ ಯಾರಾದರೂ ನನ್ನ ಮೇಲೆ ಒತ್ತಡಗಳನ್ನು ತರಲು ಪ್ರಯತ್ನಿಸಿದಲ್ಲಿ ಸಚಿವ ಸ್ಥಾನವನ್ನೇ ತೊರೆಯುವುದಕ್ಕೂ ಸಿದ್ಧ ಎಂದು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ವಿದ್ಯಾರ್ಥಿನಿ ಕೊಲೆ ಪ್ರಕರಣವನ್ನು ಸಿಒಡಿ ತನಿಖೆಗೆ ವಹಿಸಲಾಗಿದ್ದು ವರದಿ ಬಂದ ಮೇಲೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವುದಕ್ಕೆ ನಮ್ಮ ಸರ್ಕಾರಕ್ಕೆ ಯಾವುದೇ ರೀತಿಯ ಸಮಸ್ಯೆ ಇಲ್ಲವೆಂದರು.
ಮೂಡಬಿದರೆಯ ಸಿದ್ಧಾಂತ ಮಂದಿರದಲ್ಲಿ ಚಿನ್ನದ ವಿಗ್ರಹಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸದರಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದೆ. ಉಜಿರೆ ವಿದ್ಯಾರ್ಥಿನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಒಡಿ ವರದಿ ಬಂದ ನಂತರ ಅಗತ್ಯ ಬಿದ್ದಲ್ಲಿ ಸಿಬಿಐಗೆ ವಹಿಸುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

