ಗೃಹ ಸಚಿವರ ಮುಂದೆ ಅಸಮಾಧಾನದ ಹೊಗೆ
ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರಕ್ಕೆ ಗೃಹ ಸಚಿವ ಜಾರ್ಜ್ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಎರಡು ಬಣಗಳ ನಡುವಿನ ಭಿನ್ನಮತ ಸ್ಫೋಟಗೊಂಡಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಮಾವೇಶದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸೇರಿದಂತೆ ಕೆಲ ಕಾಂಗ್ರೆಸ್ ಮುಖಂಡರು ಬಹಿರಂಗವಾಗಿಯೇ ಗೃಹ ಸಚಿವರ ಮುಂದೆ ತಮ್ಮ ಅಸಮಾಧಾನ ಹೊರ ಹಾಕಿದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿರುವವರನ್ನು ಕಡೆಗಣಿಸಲಾಗುತ್ತಿದೆ. ಹೊಸಬರಿಗೆ ಜವಾಬ್ದಾರಿ ನೀಡಲಾಗುತ್ತಿದೆ. ಆದರೆ, ಪ್ರಾಮಾಣಿಕವಾಗಿ ದುಡಿದವರಿಗೆ ಮನ್ನಣೆ ಸಿಗುತ್ತಿಲ್ಲ. ಇದು ಸಹಜವಾಗಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟು ಮಾಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ಆಂಜಿನಪ್ಪ ಬೇಸರ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಯಾಗಿ ಮತ್ತೊಂದು ಬಣದ ಕೆಲ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕಾದ ನಮ್ಮ ಪಕ್ಷದವರೇ ಜೆಡಿಎಸ್ಗೆ ಬೆಂಬಲ ನೀಡಿ ಪಕ್ಷದ್ರೋಹಿ ಚಟುವಟಿಕೆ ನಡೆಸುತ್ತಿದ್ದಾರೆ. ಪ್ರಮುಖ ಸ್ಥಾನದಲ್ಲಿರುವವರೇ ಕಾಂಗ್ರೆಸ್ ವಿರುದ್ಧವಾಗಿ ನಡೆದುಕೊಂಡು ಪಕ್ಷದ ಸಂಘಟನೆಗೆ ಅಡ್ಡಿಯನ್ನುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಎರಡೂ ಬಣದ ಕಡೆ ಹೊರ ಬಂದ ಅಸಮಾಧಾನದ ಮಾತುಗಳನ್ನು ಕೇಳಿಸಿಕೊಂಡ ಗೃಹ ಸಚಿವ ಜಾರ್ಜ್, ಪಕ್ಷ ಪ್ರಾಮಾಣಿಕರನ್ನು ಖಂಡಿತವಾಗಿ ಗುರುತಿಸಿ ಸೂಕ್ತ ಜವಾಬ್ದಾರಿ ನೀಡುತ್ತದೆ. ಕಾರ್ಯಕರ್ತರು ತಾಳ್ಮೆ ವಹಿಸಬೇಕು. ಪಕ್ಷದ ಸಂಘಟನೆಗೆ ಒತ್ತು ಕೊಡಬೇಕೆಂದು ಸಲಹೆ ನೀಡಿ ಭಿನ್ನಮತ ತಣ್ಣಾಗಿಸಲು ಯತ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

