ಜನಪರ ಕಾರ್ಯ ನೀಡುವಲ್ಲಿ ಕಾಂಗ್ರೆಸ್ ಯಶಸ್ವಿ
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜನಪರ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಕೆ.ಕೆ. ಜಾರ್ಜ್ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಮಾತನಾಡಿ, ಈಗಿನ ಕಾರ್ಯಕರ್ತರೇ ನಾಳಿನ ಪಕ್ಷದ ಮುಖಂಡರು. ನಾನು ಪಕ್ಷಕ್ಕೆ ಬಂದಾಗ ನಾನು ಸಾಮಾನ್ಯ ಕಾರ್ಯಕರ್ತನಾಗಿದ್ದೆ. ಹಂತ ಹಂತವಾಗಿ ಪಕ್ಷದ ಪರ ಕೆಲಸ ಮಾಡಿದೆ. ಸಮಾಜದ ಎಲ್ಲಾ ವರ್ಗದವರ ಪರ ಕೆಲಸ ಕಾರ್ಯಗಳನ್ನು ಕಾಂಗ್ರೆಸ್ ಸರ್ಕಾರ ರೂಪಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದರು. ಪಕ್ಷದಲ್ಲಿ ನಿಷ್ಟೆಯಿಂದ ಇರಬೇಕು, ಅಧಿಕಾರಕ್ಕಾಗಿ ಆಸೆ ಪಡಬಾರದು, ಮುಂದೆ ಅಧಿಕಾರ ಸಿಗುತ್ತದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕಾಗಿದೆ. ಕರ್ನಾಟಕದಿಂದ ಹೆಚ್ಚು ಲೋಕ ಸಭಾ ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ಆಂಜಿನಪ್ಪ ಮಾತನಾಡಿ, ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿ ಇಲ್ಲದಿದ್ದರೂ ಜಿಪಂ ಚುನಾವಣೆಯಲ್ಲಿ ಪಕ್ಷ 21 ಸ್ಥಾನಗಳನ್ನು ಪಡೆದು ಇಡೀ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿತ್ತು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುವ ಹಲವಾರು ಮತದಾರರಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಗೃಹ ಸಚಿವರು ಆಗಮಿಸಿರುವುದು ಸಂತಸ ತಂದಿದೆ ಎಂದರು.
ಮಾಜಿ ಶಾಸಕ ಎಂ. ಶಿವಾನಂದ್ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಉಚಿತವಾಗಿ ಆಂಜಿನಪ್ಪನವರು ಅಕ್ಕಿ ವಿತರಣೆ ಮಾಡಿದರು. ಹಿಂದಿನ ಚುನಾವಣೆಯಲ್ಲಿ ಆಂಜಿನಪ್ಪನವರಿಗೆ ಪಕ್ಷದ ಬಿ ಫಾರಂ ದೊರೆಯುತ್ತದೆ ಎಂದುಕೊಳ್ಳಲಾಗಿತ್ತು ಆದರೆ ದೊರೆಯಲಿಲ್ಲ. ರಾಜಕಾರಣದಲ್ಲಿ ಆಂಜಿನಪ್ಪನವರಿಗೆ ಯಾವುದಾದರೂ ಸ್ಥಾನ ನೀಡಬೇಕು ಜಿಲ್ಲೆಗೆ ಇವರ ಸೇವೆ ಬಹಳ ಅಗತ್ಯವಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೋಡೇಸ್ ವೆಂಕಟೇಶ್, ಕೆ.ವಿ. ನವೀನ್ ಕಿರಣ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವೀಣಾರಾಮು, ಮಮತಾಮೂರ್ತಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

