ಬಿಜಿಎಂಎಲ್ ಶೀಘ್ರ ಪುನರಾರಂಭಕ್ಕೆ ಆಗ್ರಹ
ಕನ್ನಡಪ್ರಭ ವಾರ್ತೆ ಕೆಜಿಎಫ್ಸೆ.1
ಬಿಜಿಎಂಎಲ್ಅನ್ನು ಶೀಘ್ರದಲ್ಲಿ ಪುನರಾರಂಭ ಮಾಡಬೇಕು ಮತ್ತು ಬಿಜಿಎಂಎಲ್ನಲ್ಲಿ ನಡೆಯುತ್ತಿರುವ ಕೋಟ್ಯಂತರ ಆಸ್ತಿ ಲೂಟಿ ಅವ್ಯವಹಾರವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ನವಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಎಸ್.ಎನ್. ರಾಜಗೋಪಾಲಗೌಡ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಬೈಕ್ ರ್ಯಾಲಿಯನ್ನು ನಡೆಸಲಾಯಿತು.
ಕೆಜಿಎಫ್ನ ಆಂಡ್ರಸನ್ಪೇಟೆ ವೃತ್ತದಿಂದ ಚಾಲನೆಗೊಂಡ ಬೈಕ್ ರ್ಯಾಲಿ ನಗರದ ಬಿ.ಬ್ಲಾಕ್, ಸಲ್ಡಾನ ವೃತ್ತ, ಸೂರಜ್ಮುಲ್ ವೃತ್ತ, ಗಾಂಧಿ ವೃತ್ತ, ಪ್ರಿಚರ್ಡ್ ರಸ್ತೆ, ಗೀತಾ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.
ಈ ವೇಳೆ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಎಸ್.ಎನ್. ರಾಜಗೋಪಾಲಗೌಡ, ಬಿಜಿಎಂಎಲ್ಅನ್ನು ಮುಚ್ಚಿ 13 ವರ್ಷ ಕಳೆದಿದೆ. ಕೇಂದ್ರ ಸರ್ಕಾರ ಕಾರ್ಮಿಕರಿಗೆ ನೀಡಬೇಕಾದ 52 ಕೋಟಿ ಬಾಕಿ ಹಣ ನೀಡದೆ ಕಾರ್ಮಿಕರ ಕುಟುಂಬಗಳು ಬೀದಿಪಾಲಾಗಿವೆ. ಕೆಲಸ ಹುಡಿಕಿಕೊಂಡು ಬೇರೆ ಸ್ಥಳಗಳಿಗೆ ವಲಸೆ ಹೋಗುವ ಪರಿಸ್ಥಿತಿ ಉಂತಾಗಿದೆ. ಬಿಜಿಎಂಎಲ್ ಚಿನ್ನದ ಗಣಿಯನ್ನು ಗ್ಲೋಬಲ್ ಟೆಂಡರ್ ಮೂಲಕ ಪುನರಾರಂಭಿಸಲು ಸುಪ್ರೀಂಕೋರ್ಟ್ ಸಮ್ಮತಿಸಿದ್ದರೂ ಕೇಂದ್ರ ಗಣಿ ಸಚಿವಾಲಯ ಇದುವರೆಗೂ ಯಾವುದೇ ಜಾಗತಿಕ ಟೆಂಡರ್ ಕರೆಯುವ ಪ್ರಕ್ರಿಯೆಗೆ ಚಾಲನೆ ನೀಡಿಲ್ಲ ಎಂದು ಆರೋಪಿಸಿದರು.
ಕೆಜಿಎಫ್ ಚಿನ್ನದ ಗಣಿ ಮುಚ್ಚಿದ ನಂತರ ಬಿಜಿಎಂಎಲ್ಗೆ ಸೇರಿದ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಸಂಸ್ಥೆಯ ಅಧಿಕಾರಿಗಳು, ಭದ್ರತಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಕಳ್ಳರ ಗುಂಪುಗಳೊಂದಿಗೆ ಹಾಗೂ ಅವರ ನಾಯಕರೊಂದಿಗೆ ಶಾಮೀಲಾಗಿನ ಲೂಟಿ ಮಾಡಿದ್ದಾರೆ. ಆದ್ದರಿಂದ ಬಿಜಿಎಂಎಲ್ ಆಸ್ತಿಯ ಅವ್ಯವಹಾರವನ್ನು ಸೂಕ್ತ ತನಿಖೆ ನಡೆಸಲು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ಸಹೀಜ್ಮುಲ್ ವೃತ್ತದಲ್ಲಿ ಅರ್ಧ ಗೆಂಟೆಗೂ ಹೆಚ್ಚುಕಾಲ ರಸ್ತೆತಡೆ ನಡೆಸಿ ಬಿಜಿಎಂಎಲ್ ಆಡಳಿತ ಮಂಡಳಿ, ಬಿಜಿಎಂಎಲ್ ಭ್ರಷ್ಟ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು.
ನವಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಚಿನ್ನಿವೆಂಕಟೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ್ಕುಮಾರ್, ರಾಜ್ಯ ಉಪಾಧ್ಯಕ್ಷ ವಳ್ಳಲ್ಮುನಿಸ್ವಾಮಿ, ಮಹಿಳಾ ಅಧ್ಯಕ್ಷೆ ಭುವನೇಶ್ವರಿ, ನಗರ ಅಧ್ಯಕ್ಷ ಎ.ರಾಜ, ಮಂಜುನಾಥ್, ನವಿನೋದ್, ಕೆ.ಮಂಜುನಾಥರೆಡ್ಡಿ, ಸೋಮನಾಥ್, ಪ್ರೇಮಕುಮಾರ್, ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

