ಲಯನ್ಸ್ ಸಮಾಜಮುಖಿ ಕಾರ್ಯ ಹೆಚ್ಚಾಗಲಿ: ಅಚ್ಚ್ಯುತಾನಂದರೆಡ್ಡಿ
ಚಿಕ್ಕಬಳ್ಳಾಪುರ: ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹೆಚ್ಚಿಗೆ ಹಮ್ಮಿಕೊಳ್ಳುವ ಮೂಲಕ ಸಾರ್ಥಕ ಸಾಧನೆಗೈಯುವ ಪರಿಪಾಠ ರೂಢಿಸಿಕೊಳ್ಳಬೇಕೆಂದು ಲಯನ್ ರಾಜ್ಯಪಾಲ ಬಿ.ವಿ.ಅಚ್ಚ್ಯುತಾನಂದರೆಡ್ಡಿ ಕಿವಿಮಾತು ಹೇಳಿದರು.
ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್ ಹಾಗೂ ಚಿಕ್ಕಬಳ್ಳಾಪುರ ಲಯನ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 2013-14ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜ ನಮಗೇನು ಮಾಡಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನನ್ನ ಕೊಡುಗೆ ಏನು ಎಂಬುದನ್ನು ಪ್ರತಿಯೊಬ್ಬರೂ ಪ್ರಶ್ನಿಸಿಕೊಂಡಾಗ ಮಾತ್ರ ಈ ಸಮಾಜದ ಸುಸ್ಥಿರತೆ ಕಾಪಾಡಿದಂತಾಗುತ್ತದೆ ಎಂದರು. ಚಿಕ್ಕಬಳ್ಳಾಪುರ ಲಯನ್ಸ್ ಸಂಸ್ಥೆ ನೂತನ ಅಧ್ಯಕ್ಷ ಸುನಿಲ್ ಮಾತನಾಡಿ, ತನ್ನ ದುಡಿಮೆಯ ಸ್ವಲ್ಪ ಭಾಗವನ್ನು ಮತ್ತು ತನ್ನ ದುಡಿಮೆ ಸ್ವಲ್ಪ ಸಮಯವನ್ನು ಸಾಮಾಜಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸುವ ಇಂಗಿತ ವ್ಯಕ್ತಪಡಿಸಿದರು. ಚಿಕ್ಕಬಳ್ಳಾಪುರ ಲಯನ್ ಸಂಸ್ಥೆ ನಿರ್ಗಮಿತ ಅಧ್ಯಕ್ಷ ಲಯನ್ ಡಾ.ಮಹೇಶ್ ಮಾತನಾಡಿದರು. ಉಪ-ವಿಭಾಗಾಧಿಕಾರಿಶಾಂತಲಾ , ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃಚ ಚಿಕ್ಕಬಳ್ಳಾಪುರ ವೃತ್ತ ನಿರೀಕ್ಷಕ ಎಸ್.ಮಹೇಶ್ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಅ.18 ರವರೆಗೆ ರಾಸುಗಳಿಗೆ ಲಸಿಕೆ
ಶಿಡ್ಲಘಟ್ಟ: ರಾಸುಗಳಿಗೆ ಕಾಲುಬಾಯಿ ಜ್ವರದ ನಿಯಂತ್ರಣಕ್ಕೆ ರಾಷ್ಟ್ರೀಯ ಕಾಲುಬಾಯಿ ಜ್ವರ ನಿಯಂತ್ರಣ ಯೋಜನೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಶಿಡ್ಲಘಟ್ಟ, ಹಾಗೂ ಕೋಲಾರ-ಚಿಕ್ಕಬಳ್ಳಾಪುರ ಹಾಲುಒಕ್ಕೂಟ, ಶಿಡ್ಲಘಟ್ಟ ಸಂಯುಕ್ತಾಶ್ರಯದಲ್ಲಿ ಸಮೂಹ ಲಸಿಕೆ ಕಾರ್ಯಕ್ರಮವು ಈಗಾಗಲೆ ಪ್ರಾರಂಭವಾಗಿದ್ದು ಅಕ್ಟೋಬರ್ 18 ರವರೆಗೆ ತಾಲೂಕಿನಾದ್ಯಂತ ಉಚಿತವಾಗಿ ರಾಸುಗಳಿಗೆ ಲಸಿಕೆಯನ್ನು ಹಾಕಲಾಗುತ್ತದೆ ಎಂದು ಪಶು ವೈದ್ಯ ಆಸ್ಪತ್ರೆ ಸಹಾಯಕ ನಿರ್ದೇಶಕ ಮುನಿನಾರಾಯಣರೆಡ್ಡಿ ತಿಳಿಸಿದ್ದಾರೆ. ರೈತರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಲು ಸಹಾಯಕ ನಿರ್ದೇಶಕ ಡಾ. ಮುನಿನಾರಾಯಣರೆಡ್ಡಿ ಹಾಗೂ ಉಪವ್ಯವಸ್ಥಾಪಕರಾದ ಡಾ.ಕೆ.ಜಿ. ಈಶ್ವರಯ್ಯರವರು ರೈತರಲ್ಲಿ ಕೋರಿದ್ದಾರೆ.
'ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿ'
ಕೋಲಾರ: ಮುಳಬಾಗಿಲು ತಾಲೂಕಿನಲ್ಲಿ ಅನೇಕ ವರ್ಷಗಳಿಂದ ಮರಳು ಸಾಗಣೆ ಆಗುತ್ತಿದೆ. ಇದನ್ನು ಏಕಾಏಕಿ ತಡೆಯಲು ಕಷ್ಟ. ಜಿಲ್ಲಾ ಆಡಳಿತ ಮರಳು ಸಾಗಣೆ ಕೆಲಸದಲ್ಲಿ ನಿರತರಾಗಿರುವ ಜನರಿಗೆ ಪರ್ಯಾಯ ಉದ್ಯೋಗ ಕಲ್ಪಿಸಿದರೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ ಎಂದು ಮುಳಬಾಗಿಲು ಶಾಸಕ ಕೊತ್ತೂರು ಮಂಜುನಾಥ್ ಅಭಿಪ್ರಾಯಪಟ್ಟರು. ಅವರು ಶನಿವಾರ ನಗರದ ಜಿಪಂನಲ್ಲಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಕ್ರಮ ಮರಳು ಸಾಗಾಣೆಗೆ ನನ್ನ ವಿರೋಧವಿದೆ, ಇದನ್ನು ತಡೆಗಟ್ಟಬೇಕಾದರೆ ಮುಳಬಾಗಿಲು ತಾಲೂಕಿನ ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವುದು ಸೂಕ್ತವೆಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

