ಶ್ರಾವಣ ಶನಿವಾರದ ಪ್ರಯುಕ್ತ ವಿಶೇಷ ಪೂಜೆ
ಕ.ಪ್ರ. ವಾರ್ತೆಚಿಂತಾಮಣಿಸೆ.1
ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಕೈವಾರದಲ್ಲಿ ಅಮರನಾರಾಯಣಸ್ವಾಮಿ ದೇವಾಲಯ ಮತ್ತು ಸದ್ಗುರು ಯೋಗಿನಾರೇಯಣ ಮಠದಲ್ಲಿ ಶ್ರಾವಣದ ನಾಲ್ಕನೇ ಶನಿವಾರದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಭಕ್ತಾದಿಗಳು ದೂರದ ಊರುಗಳಿಂದ ತಂಡೋಪತಂಡವಾಗಿ ಆಗಮಿಸಿ ಸರದಿ ಸಾಲಿನಲ್ಲಿ ನಿಂತು ಶ್ರಾವಣ ಶನಿವಾರದಂದು ದೇವರ ದರ್ಶನಕ್ಕಾಗಿ ಕಾಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮಳೆ ಬಿದ್ದ ಕಾರಣ ವಾತಾವರಣವು ಶಾಂತಮಯವಾಗಿ ಭಕ್ತಿಗೆ ಪೂರಕವಾಗಿತ್ತು.
ಆಲಂಬಗಿರಿಯಲ್ಲಿ ವಿಶೇಷ ಪೂಜೆ: ತಾಲೂಕಿನ ಪುರಾಣ ಪ್ರಸಿದ್ಧ ಐತಿಹಾಸಿಕ ಆಲಂಬಗಿರಿ ಕಲ್ಕಿ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ನಾಲ್ಕನೇ ಶನಿವಾರ ವಿಶೇಷ ಪೂಜಾ ಕೈಂಕರ್ಯ ಹಮ್ಮಿಕೊಳ್ಳಲಾಗಿತ್ತು. ಬೆಳಗಿನಿಂದಲೇ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಹರಕೆ ಸಲ್ಲಿಸಿದರು.
ಲಕ್ಷ್ಮೀ ದೇಗುಲದಲ್ಲಿ ಅಮ್ಮನವರಿಗೆ ಅಲಂಕಾರ ಮಾಡಲಾಗಿತ್ತು. ಆಂಜನೇಯಸ್ವಾಮಿ ದೇವಾಲಯದಲ್ಲೂ ವಿಶೇಷ ಪೂಜೆ, ಯೋಗಿನಾರೇಯಣ ಮಠದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.
ಲಯನ್ಸ್ ಸಮಾಜಮುಖಿ ಕಾರ್ಯ ಹೆಚ್ಚಾಗಲಿ: ಅಚ್ಚ್ಯುತಾನಂದರೆಡ್ಡಿ
ಚಿಕ್ಕಬಳ್ಳಾಪುರ: ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹೆಚ್ಚಿಗೆ ಹಮ್ಮಿಕೊಳ್ಳುವ ಮೂಲಕ ಸಾರ್ಥಕ ಸಾಧನೆಗೈಯುವ ಪರಿಪಾಠ ರೂಢಿಸಿಕೊಳ್ಳಬೇಕೆಂದು ಲಯನ್ ರಾಜ್ಯಪಾಲ ಬಿ.ವಿ.ಅಚ್ಚ್ಯುತಾನಂದರೆಡ್ಡಿ ಕಿವಿಮಾತು ಹೇಳಿದರು.
ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್ ಹಾಗೂ ಚಿಕ್ಕಬಳ್ಳಾಪುರ ಲಯನ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 2013-14ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜ ನಮಗೇನು ಮಾಡಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನನ್ನ ಕೊಡುಗೆ ಏನು ಎಂಬುದನ್ನು ಪ್ರತಿಯೊಬ್ಬರೂ ಪ್ರಶ್ನಿಸಿಕೊಂಡಾಗ ಮಾತ್ರ ಈ ಸಮಾಜದ ಸುಸ್ಥಿರತೆ ಕಾಪಾಡಿದಂತಾಗುತ್ತದೆ ಎಂದರು. ಚಿಕ್ಕಬಳ್ಳಾಪುರ ಲಯನ್ಸ್ ಸಂಸ್ಥೆ ನೂತನ ಅಧ್ಯಕ್ಷ ಸುನಿಲ್ ಮಾತನಾಡಿ, ತನ್ನ ದುಡಿಮೆಯ ಸ್ವಲ್ಪ ಭಾಗವನ್ನು ಮತ್ತು ತನ್ನ ದುಡಿಮೆ ಸ್ವಲ್ಪ ಸಮಯವನ್ನು ಸಾಮಾಜಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸುವ ಇಂಗಿತ ವ್ಯಕ್ತಪಡಿಸಿದರು. ಚಿಕ್ಕಬಳ್ಳಾಪುರ ಲಯನ್ ಸಂಸ್ಥೆ ನಿರ್ಗಮಿತ ಅಧ್ಯಕ್ಷ ಲಯನ್ ಡಾ.ಮಹೇಶ್ ಮಾತನಾಡಿದರು. ಉಪ-ವಿಭಾಗಾಧಿಕಾರಿಶಾಂತಲಾ , ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃಚ ಚಿಕ್ಕಬಳ್ಳಾಪುರ ವೃತ್ತ ನಿರೀಕ್ಷಕ ಎಸ್.ಮಹೇಶ್ಕುಮಾರ್ ಅವರನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

