ಕೊಲೆ ಯತ್ನ; ದೂರು ದಾಖಲು
ಕೆಜಿಎಫ್: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಲು ಪ್ರಯತ್ನಿಸಿರುವ ಘಟನೆ ರಾಬರ್ಟ್ಸನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾರಿಕುಪ್ಪಂ ನಿವಾಸಿ ಅರುಣ್ಕುಮಾರ್ ಎಂಬಾತ ತನ್ನ ಸ್ನೇಹಿತರಾದ ಪ್ರಭಾಕರ್ ಮತ್ತು ರಾಜ್ಕಿರಣ್ ಅವರೊಂದಿಗೆ ಅದೇ ಬಡಾವಾಣೆಯ ನಿವಾಸಿಗಳಾದ ಶರತ್ ಮತ್ತು ವಿನೋದ್ ಎಂಬುವರು ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡುವ ಉದ್ದೇಶದಿಂದ ಅರುಣ್ಕುಮಾರ್ನನ್ನು ಹಿಡಿದುಕೊಂಡು ಕತ್ತಿಯಿಂದ ಶರತ್ ಎಂಬಾತ ಹೊಡೆಯಲು ಬಂದಾಗ ವಿನೋದ್ನನ್ನು ತಳ್ಳಿಬಿಟ್ಟು ತಪ್ಪಿಸಿಕೊಂಡು ಓಡಿದ್ದಾನೆ. ಶರತ್ ಅದೇ ಕತ್ತಿಯಿಂದ ಅರುಣ್ಕುಮಾರ್ಗೆ ಸೇರಿದ ದ್ವಿಚಕ್ರ ವಾಹನ ನಾಶಪಡಿಸಿ, ಪ್ರಾಣಬೆದರಿಕೆ ಹಾಕಿರುವುದಾಗಿ ಅರುಣ್ಕುಮಾರ್ ರಾಬರ್ಟ್ಸನ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕಾಶೀನಾಥ್ ಅಪರ ಡಿಸಿ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಅಪರ ಜಿಲ್ಲಾಧಿಕಾರಿಯಾಗಿ ಕಾಶೀನಾಥ್ ಪವಾರ್ ಸೋಮವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿ ಸತ್ಯಭಾಮಾ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯ ಸರ್ಕಾರ ಸತ್ಯಭಾಮ ಅವರನ್ನು ಯುವಜನ ಮತ್ತು ಸೇವಾ ಕ್ರೀಡಾ ಇಲಾಖೆಯ ಜಂಟಿ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಕಾಶೀನಾಥ್ ಪವಾರ್ ಇದೀಗ ಅಪರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಮಾರ್ಗದರ್ಶನ ಸಭೆ
ಚಿಕ್ಕಬಳ್ಳಾಪುರ: ನಗರದ ಅಂಬೇಡ್ಕರ್ ಭವನ ಸೆ.4 ರಂದು ಬೆಳಗ್ಗೆ 10 ಗಂಟೆಗೆ ನಗರಸಭೆಯ ವ್ಯಾಪ್ತಿಯಲ್ಲಿ ಎಸ್ಜೆಎಸ್ಆರ್ವೈ ಯೋಜನೆಯ 2013-14ನೇ ಸಾಲಿನ ಸ್ಟೆಫ್-ಅಫ್ ಘಟಕದಡಿ ತರಬೇತಿ ನೀಡಲು ನಿರುದ್ಯೋಗ ಯುವಕ-ಯುವತಿಯರ ಆಯ್ಕೆಯ ಮಾರ್ಗದರ್ಶನ ಸಭೆ ಹಮ್ಮಿಕೊಳ್ಳಲಾಗಿದೆ. ಉಚಿತ ತರಬೇತಿಗೆ ಸುಮಾರು 600 ಫಲಾನುಭವಿಗಳನ್ನು ಆಯ್ಕೆ ಮಾಡಲು ಸರ್ಕಾರ ತಿಳಿಸಿದ್ದು ಈ ಹಿನ್ನೆಲೆಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಆಸಕ್ತರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನಸ್ಪಂದನ ಕಾರ್ಯಕ್ರಮ
ಚಿಕ್ಕಬಳ್ಳಾಪುರ: ತಾಲೂಕಿನ ಅಂಗರೇಖನಹಳ್ಳಿಯಲ್ಲಿ ಸೆ.7 ರಂದು ಬೆಳಗ್ಗೆ 11 ಗಂಟೆಗೆ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಾ.ಕೆ.ಸುಧಾಕರ್ ವಹಿಸಲಿದ್ದಾರೆ. ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ತಹಸೀಲ್ದಾರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

