ಕೋಲಾರ

ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

Published On :

ಕ.ಪ್ರ.ವಾರ್ತೆ   ಕೋಲಾರ   ಸೆ.2
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೇತೃತ್ವದ ಯುಪಿಯ ಸರ್ಕಾರದ ದುರಾಡಳಿತದಿಂದಾಗಿ ಜನ ಸಾಮಾನ್ಯರು ನೆಮ್ಮದಿಯಿಂದ ಬದುಕುವುದು ಕಷ್ಟವಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಆರೋಪಿಸಿದರು.
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೋಮವಾರ ನಗರದ ಮಕ್ಕೆ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿ ಇಂಧನ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರವನ್ನು ಖಂಡಿಸಿದರು.
ಕಳೆದ 10 ವರ್ಷಗಳಿಂದ ದೇಶದಲ್ಲಿ ಆಳ್ವಿಕೆ ನಡೆಸುತ್ತಿರುವ ಯುಪಿಎ ಸರ್ಕಾರ ಜನಸಾಮಾನ್ಯರ ಮೇಲೆ ನಿರಂತರವಾಗಿ ಬೆಲೆ ಏರಿಕೆಯ ಹೊರೆ ಹೊರೆಸಿದ್ದು, ಇದರಿಂದ ಜನ ಸಂಕಷ್ಟಕ್ಕೀಡಾಗಿದ್ದಾರೆಂದು ಟೀಕಿಸಿದರು.
ಜಿಲ್ಲಾಧ್ಯಕ್ಷ ಕೃಷ್ಣಾರೆಡ್ಡಿ ಮಾತನಾಡಿ ಯುಪಿಎ ಹಗರಣಗಳು ಒಂದಲ್ಲ ಎರಡಲ್ಲ, ನೂರಾರು, 10 ವರ್ಷಗಳಲ್ಲಿ ಯುಪಿಎ ಸರ್ಕಾರ ಮಾಡಿರುವ ಹಗರಣಗಳನ್ನು ಲೆಕ್ಕ ಹಾಕಲೂ ಸಾಧ್ಯವಿಲ್ಲ ಎಂದರು. ಯುಪಿಎ ಸರ್ಕಾರದ ಮೇಲೆ ಜನ ವಿಶ್ವಾಸ ಕಳೆದುಕೊಂಡಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲು ಖಚಿತ ಎಂಬುದನ್ನು ಅರಿತಿರುವ ಯುಪಿಎ ಸರ್ಕಾರ ದೇಶವನ್ನು ಲೂಟಿ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಎಸ್ಸಿ,ಎಸ್ಟಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ವೆಂಕಟೇಶಮೌರ್ಯ, ಪ್ರಧಾನ ಕಾರ್ಯದರ್ಶಿಗಳಾದ ತಲಗುಂದ ನರಸಿಂಹರಾಜು, ಮಾಗೇರಿ ನಾರಾಯಣಸ್ವಾಮಿ, ಉಪಾಧ್ಯಕ್ಷರಾದ ಲಕ್ಷ್ಮಣ್ಗೌಡ, ಕೆ.ಜಿ.ಎಫ್ ವಿಜಯಕುಮಾರ್, ಗುಟ್ಲೂರು ಮಂಜುನಾಥ್, ವಿಜಯಲಕ್ಷ್ಮಮ್ಮ, ಹೂವಳ್ಳಿ ಚಲಪತಿ, ಕಾರ್ಯದರ್ಶಿಗಳಾದ ಹಾರೋಹಳ್ಳಿ ನಾರಾಯಣಸ್ವಾಮಿ, ವಿಜಯಕುಮಾರ್, ಮು. ರಾಘವೇಂದ್ರ, ಮಮತಾ, ಕೋಲಾರ ನಗರ ಅಧ್ಯಕ್ಷರಾದ ಜಯಂತಿಲಾಲ್, ಗ್ರಾಮಾಂತರ ಅಧ್ಯಕ್ಷ ಚಿನ್ನಾಪುರ ನಾರಾಯಣಸ್ವಾಮಿ, ಶ್ರೀನಿವಾಸಪುರ ತಾಲೂಕು ಅಧ್ಯಕ್ಷ ಶಿವಶಂಕರಗೌಡ, ಕೆ.ಜಿ.ಎಫ್ ಗೋಪಾಲಕೃಷ್ಣ, ಮಹಿಳಾಮೋರ್ಚಾ ಅಧ್ಯಕ್ಷೆ ನಿರ್ಮಲಮ್ಮ, ಯುವ ಮೋರ್ಚಾ ಅಧ್ಯಕ್ಷ ಪ್ರಮೋದ್, ರೈತ ಮೋರ್ಚಾ ಅಧ್ಯಕ್ಷ ಕೆಂಬೋಡಿ ನಾರಾಯಣಸ್ವಾಮಿ, ಎಸ್ಸಿ ಮೋರ್ಚಾ ಅಧ್ಯಕ್ಷ ರಾಮಸಂದ್ರ ನಾಗರಾಜ್, ಎಸ್ಟಿ ಮೋರ್ಚಾ ಅಧ್ಯಕ್ಷ ತಿಮ್ಮರಾಯಪ್ಪ, ಸ್ಲಂ ಮೋರ್ಚಾ ಅಧ್ಯಕ್ಷ ಸಾಹುಕಾರ್ ಶಂಕರಪ್ಪ, ವೆಂಕಟರೆಡ್ಡಿ, ಓಹಿಲೇಶ್, ನಗರ ಪ್ರಧಾನ ಕಾರ್ಯದರ್ಶಿ ಸುರೇಶ್, ಹಿಂದುಳಿದ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್, ಅಬ್ಬಣಿ ನಾಗರಾಜ್, ನರೇಶ್, ಶ್ರೀನಾಥ್, ಮಂಜುಳಾದೇವಿ, ವಿಜಯಲಕ್ಷ್ಮಿ, ನಿರ್ಮಲಮ್ಮ, ಸುವರ್ಣಮ್ಮ, ಜಿಲ್ಲಾ ವಕ್ತಾರ ಮಹೇಶ್ ಶಿಳ್ಳಂಗೆರೆ  ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.