ಕೋಲಾರ

'ಗ್ರಾಮೀಣರಿಗೆ ಕಾನೂನು ಸಾಕ್ಷರತೆ ಉದ್ದೇಶದಿಂದ ಯಾತ್ರೆ'

Published On :

ಶಿಡ್ಲಘಟ್ಟ: ಗ್ರಾಮೀಣ ಪ್ರದೇಶದ ಜನರಿಗೆ ಕಾನೂನು ಸಾಕ್ಷರತೆ ಮೂಡಿಸುವ ಉದ್ದೇಶದಿಂದ ಸಾಕ್ಷರತಾ ರಥಯಾತ್ರೆ ಆಯೋಜಿಸಿರುವುದಾಗಿ ಪ್ರಧಾನ ಸಿವಿಲ್ ನ್ಯಾ. ಎಸ್.ಮಹೇಶ್ ತಿಳಿಸಿದರು.
ನ್ಯಾಯಾಲಯದ ಆವರಣದಿಂದ ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿ, ಕುಂದಲಗುಕರ್, ಅಂಭಿಗಾನಹಳ್ಳಿ, ಹಾರಡಿ, ಕನ್ನಮಂಗಲ, ಆನೆಮಡುಗು, ಶೆಟ್ಟಿಕೆರೆ ಮತ್ತು ಎಸ್.ದೇವಗಾನಹಳ್ಳಿ ಗ್ರಾಮಗಳಲ್ಲಿ ಮೂರು ದಿನಗಳ ಕಾಲ ಕಾನೂನು ಅರಿವು ನೆರವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ, ಹಿಂದೂ ಮಹಿಳೆಯ ಆಸ್ತಿ ಹಕ್ಕು, ಬಾಲ್ಯ ವಿವಾಹ ನಿಷೇಧ, ವ್ಯಾಜ್ಯಗಳ ಪರಿಹಾರಕ್ಕೆ ಬದಲಿ ಮಾರ್ಗಗಳ ವ್ಯವಸ್ಥೆ, ಕರ್ನಾಟಕ ಅಬಕಾರಿ ಕಾಯ್ದೆ, ಶಿಕ್ಷಣ ಹಕ್ಕು, ವ್ಯಾಜ್ಯ ಪೂರ್ವ ಇತ್ಯರ್ಥ, ಮಾಹಿತಿ ಹಕ್ಕು ಕಾಯ್ದೆ, ಕೌಟುಂಬಿಕ ದೌರ್ಜನ್ಯ ತಡೆ ಮುಂತಾದ ಗ್ರಾಮೀಣ ಜನರಿಗೆ ಅತ್ಯಗತ್ಯ ಮಾಹಿತಿಗಳನ್ನು ವಕೀಲರು ತಿಳಿಸಲಾಗುವುದೆಂದು ಹೇಳಿದರು.
ಹೆಚ್ಚುವರಿ ಸಿವಿಲ್ ನ್ಯಾ. ವಿಜೆ ದೇವರಾಜ ಅರಸ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದೇವರಾಜೇಗೌಡ, ಸೌಂದರ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಡಾ.ವಿಜಯಾ, ಸರ್ಕಾರಿ ಸಹಾಯಕ ಅಭಿಯೋಜಕ ಈ.ಡಿ.ಶ್ರೀನಿವಾಸ, ಸರ್ಕಲ್ ಇನ್ಸ್ಪೆಕ್ಟರ್ ಆರ್.ಜಗದೀಶ್, ವಕೀಲರಾದ ಕೆ.ಯೋಗಾನಂದ, ಸತ್ಯನಾರಾಯಣ್, ಸಿ.ಲಕ್ಷ್ಮೀ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.