ಕೋಲಾರ

ಗಣೇಶ ಹಬ್ಬ: ಪರಿಸರ ಸ್ನೇಹಿ ಸಭೆ

Published On :

ಕೋಲಾರ: ಗೌರಿ-ಗಣೇಶ ಚತುರ್ಥಿ ಸಂದರ್ಭದಲ್ಲಿ ಗೌರಿ-ಗಣಪತಿ ವಿಗ್ರಹಗಳನ್ನು ನೀರಿನಲ್ಲಿ ವಿಸರ್ಜಿಸುವುದರಿಂದ ಅವುಗಳಲ್ಲಿ ಉಪಯೋಗಿಸುವ ಬಣ್ಣಗಳು ನೀರಿನಲ್ಲಿ ಬೆರೆತು ನೀರನ್ನು ಮಲಿನಗೊಳಿಸುವ ಸಾಧ್ಯತೆ ಇರುವುದರಿಂದ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಸಲುವಾಗಿ ಜನತೆಯಲ್ಲಿ ಅರಿವು ಮೂಡಿಸಲು ಸೆ.4 ರಂದು ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಸರ ಸ್ನೇಹಿ ಸಭೆಯನ್ನು ಕರೆಯಲಾಗಿದೆ. ಗೌರಿ-ಗಣೇಶ ಮೂರ್ತಿಗಳನ್ನು ಬಣ್ಣ ರಹಿತವಾಗಿ ತಯಾರಿಸುವಂತೆ ಮೂರ್ತಿ ತಯಾರಕರಿಗೆ ಅರಿವು ಮೂಡಿಸಲು ಜಿಲ್ಲಾ ಪರಿಸರ ಸಂರಕ್ಷಣಾ ಪ್ರಾಧಿಕಾರ ಮತ್ತು ಇತರೆ ಇಲಾಖೆಗಳನ್ನೊಳಗೊಂಡ ಸಭೆಯನ್ನು ಕರೆಯಲು ಉದ್ದೇಶಿಸಿದೆ. ಈ ಸಂಬಂಧವಾಗಿ ಜಿಲ್ಲಾಧಿಕಾರಿ ಡಿ.ಕೆ. ರವಿ ಅವರ ಅಧ್ಯಕ್ಷತೆಯಲ್ಲಿ ಕರೆದಿರುವ ಸಭೆಗೆ ಮೂರ್ತಿ ತಯಾರಕರು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಸಲಹೆಗಳನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ತಿಳಿಸಿದ್ದಾರೆ.
ಇಂದು  ವಿದ್ಯುತ್ ವ್ಯತ್ಯಯ
ಕೋಲಾರ: ನಗರದಲ್ಲಿ ವಿದ್ಯುತ್ ಸರಬರಾಜು ಅಭಿವೃದ್ಧಿ ಸಲುವಾಗಿ ಸೆ.4 ರಂದು ಕಾಮಗಾರಿ ಕೈಗೊಂಡಿರುವುದರಿಂದ ಎಫ್-7ರ ವ್ಯಾಪ್ತಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ, ಎಂ.ಬಿ.ರಸ್ತೆ, ಕಾಳಮ್ಮ ಗುಡಿ ಬೀದಿ, ಬ್ರಾಹ್ಮಣರ ಬೀದಿ, ಚಂಪಕ್ ವೃತ್ತ್ತದವರೆಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ನಗರ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಕರ ದಿನಾಚರಣೆ
ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ದಿನಾಚರಣೆ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಭಾರತ ರತ್ನ ಡಾ.ಎಸ್. ರಾಧಾಕೃಷ್ಣನ್ ಅವರ ಜನ್ಮದಿನೋತ್ಸವದ ಅಂಗವಾಗಿ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಸೆ.5 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಶ್ರೀ ಟಿ.ಚನ್ನಯ್ಯ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸ್ವತಂತ್ರ ಸಚಿವರಾದ ಕೆ.ಹೆಚ್. ಮುನಿಯಪ್ಪರವರ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಆರ್. ವರ್ತೂರು ಪ್ರಕಾಶ್ ಅಧ್ಯಕ್ಷತೆ ವಹಿಸುವರು ಹಾಗೂ ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮತ್ತಿತರ ಗಣ್ಯರು ಭಾಗವಹಿಲಿದ್ದಾರೆಂದು ಶಿಕ್ಷಣ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಶಂಷುದ್ದಿನ್ ಬಾಬುಗೆ ಅಧ್ಯಕ್ಷ  ಸ್ಥಾನ ಕಲ್ಪಿಸುವಂತೆ ಒತ್ತಾಯ
ಬಂಗಾರಪೇಟೆ: ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತರ ಹಾಗೂ ಪುರಸಭೆಯಲ್ಲಿ ನಾಲ್ಕು ಬಾರಿ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿರುವ ಶಂಷುದ್ದಿನ್ ಬಾಬು ಅವರಿಗೆ ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಕಲ್ಪಿಸಿಕೊಡುವ ಮೂಲಕ ಬಾಬು ಅವರ ಸೇವೆಯನ್ನು ಮತ್ತಷ್ಟು ಜನರಿಗೆ ಲಭಿಸುವಂತೆ ಮಾಡಬೇಕೆಂದು ಅಲ್ಪಸಂಖ್ಯಾತರ ಘಟಕ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕೊಲೆ ಆರೋಪಿ ಸುಳಿವು ನೀಡಲು ಪೊಲೀಸರ ಮನವಿ
ಕೋಲಾರ: ಪತ್ನಿ ಮತ್ತು ಮಗುವಿನ ಸಾವಿನ ಪ್ರಕರಣದ ಆರೋಪಿ ಎಸ್.ಕೆ. ಸಂತೋಷ್ಕುಮಾರ್ ಎಂಬುವರು ಕಳೆದ ತಿಂಗಳು ಜುಲೈ 10 ರಿಂದ ತಲೆಮರೆಸಿಕೊಂಡಿದ್ದು ಈ ವ್ಯಕ್ತಿ ಯಾರಿಗಾದರೂ ಕಾಣಿಸಿದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಎಸ್ಪಿ ತಿಳಿಸಿದ್ದಾರೆ. ಆರೋಪಿ ಸಂತೋಷ್ಕುಮಾರ್ ಹೊಸಕೋಟೆ ತಾಲೂಕಿನ ಸೂಲಿಬೆಲೆ ಸರ್ಕಾರಿ ಕಾಲೇಜಿನಲ್ಲಿ  ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ಮೇಲೆ ಕೋಲಾರ ನಗರ ಠಾಣೆಯಲ್ಲಿ ಪತ್ನಿ ಮತ್ತು ಮಗುವಿನ ಕೊಲೆ ಆರೋಪವಿರುವುದರಿಂದ   ಈ ಆಸಾಮಿ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ಸಿಕ್ಕಲ್ಲಿ ಕೋಲಾರದ ಡಿ.ಎಸ್.ಪಿ , ಮೊ.9480802620,ಎಸ್.ಪಿ. ಮೊ. 9480802601, ಎ.ಎಸ್.ಪಿ. ಮೊ.9480802602 ಅಥವಾ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಿ ಆಪಾದಿತನನ್ನು ಪತ್ತೆ ಹಚ್ಚಲು ಸಹಕಾರ ನೀಡಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.