ಮಕ್ಕಳಲ್ಲಿ ಕ್ರೀಡೆ ಕುರಿತು ಆಸಕ್ತಿ ಬೆಳೆಸಲು ಕರೆ
ಮುಳಬಾಗಲು: ಇಂದಿನ ಮಕ್ಕಳು ಮುಂದಿನ ನಾಯಕರು. ಕ್ರೀಡೆಯಲ್ಲಿ ಮಕ್ಕಳೆಲ್ಲರೂ ಭಾಗವಹಿಸಲು ಶಾಸಕ ಕೊತ್ತೂರು ಮಂಜುನಾಥ್ ನುಡಿದರು.
ತಾಲೂಕಿನ ಬಾಳಸಂದ್ರ ಗ್ರಾಮದಲ್ಲಿ ಮೂರು ದಿನಗಳ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟವನ್ನು ಉದ್ಫಾಟಿಸಿ ಮಾತನಾಡಿ, ಇತ್ತೀಚಿನ ದಿವಸಗಳಲ್ಲಿ ಮಕ್ಕಳಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿ ಕಡಿಮೆಯಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕ್ರೀಡೆಗಳಲ್ಲಿ ಮಕ್ಕಳು ಭಾಗವಹಿಸಿ ಹೋಬಳಿ, ತಾಲೂಕು, ಜಿಲ್ಲಾ ಮಟ್ಟಗಳಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಲು ಪ್ರೋತ್ಸಾಹ ನೀಡುವ ಅವಶ್ಯಕತೆ ಇರುವುದೆಂದು ನುಡಿದರು. ಬಾಳಸಂದ್ರ ಗ್ರಾಮದ ಪ್ರೌಢಶಾಲೆ ಗೋಡೆ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜ್ ಧ್ವಜಾರೋಹಣ ಮಾಡಿ ಮಾತನಾಡಿ, ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸಲು ಹೆಚ್ಚು ಭಾಗವಹಿಸುವಂತಾಗಬೇಕು. ತಾಲೂಕಿನ ಹಲವಾರು ಶಾಲೆಗಳಿಂದ ಕ್ರೀಡಾಕೂಟದಲ್ಲಿ ಮಕ್ಕಳು ಭಾಗವಹಿಸಿದ್ದರು. ಅಂಬ್ಲಿಕಲ್ ಪಪಂ ಅಧ್ಯಕ್ಷೆ ಅಮರಮ್ಮ ರಾಮಚಂದ್ರಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಜಗದೀಶ್, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಜಗನ್ನಾಥ್, ವಕೀಲ ತಿಮ್ಮರಾಯಪ್ಪ, ಗ್ರಾಪಂ ಸದಸ್ಯೆ ಸುಜಾತಮ್ಮ ನಾರಾಯಣಪ್ಪ, ಶಿವಪ್ಪ, ಹನುಮಪ್ಪ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

