ಕೋಲಾರ

ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Published On :

ಚಿಕ್ಕಬಳ್ಳಾಪುರ: ಸಾಯಿಕೃಷ್ಣ ಚಾರಿಟೇಬಲ್ ಟ್ರಸ್ಟ್  ವತಿಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸೋಮವಾರ ನೋಟು ಪುಸ್ತಕಗಳನ್ನು ವಿತರಿಸಲಾಯಿತು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ನೋಟು ಪುಸ್ತಕ ವಿತರಿಸಲಾಯಿತು.  ಶಿಕ್ಷಣದಿಂದ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು. ಇದನ್ನರಿತು ವಿದ್ಯಾರ್ಥಿಗಳು ಶ್ರದ್ಧೆಯಿಂದ ಶಿಕ್ಷಣವನ್ನು ಪಡೆದುಕೊಂಡು ಜೀವನದಲ್ಲಿ ಮುಂದೆ ಬರಬೇಕು. ತಾವು ಅಭಿವೃದ್ಧಿಯನ್ನು ಸಾಧಿಸುವುದರ ಜತೆಗೆ ದೇಶದ ಅಭಿವೃದ್ಧಿಗೂ ಕೊಡುಗೆ ನೀಡಿ ತಂದೆ ತಾಯಿ, ಗುರುಗಳಿಗೆ ಹೆಸರನ್ನು ತಂದು ಕೊಡಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಲಾಯಿತು.  ಬಡ ವಿದ್ಯಾರ್ಥಿಗಳಿಗೆ ನೆರವು ಒದಗಿಸಲು ಮುಂದೆ ಬಂದಾಗ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಅದೇ ರೀತಿ ಉತ್ತಮ ಸ್ಥಾನವನ್ನು ಗಳಿಸಿದ ನಂತರ ತಮ್ಮಂತೆಯೇ ಇತರರು ಸಹ ಜೀವನದಲ್ಲಿ ಮುಂದೆ ಬರುವಂತಾಗಲು ಸ್ವಯಂ ಪ್ರೇರಣೆಯಿಂದ ಅಗತ್ಯ ನೆರವು ನೀಡಲು ಮುಂದಾಗಬೇಕೆಂದು ಸಲಹೆ ನೀಡಲಾಯಿತು. ಶಾಸಕ ಕೆ.ಸುಧಾಕರ್, ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಮುಖಂಡ ಪಿ.ಎನ್.ಕೇಶವರೆಡ್ಡಿ ಮುಂತಾದವರು ಈ ವೇಳೆ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.