ವಿದ್ಯಾರ್ಥಿಗಳ ಕನ್ನಡ ಪ್ರೀತಿಗೆ ಮೆಚ್ಚುಗೆ
ಚಿಂತಾಮಣಿ: ಅಚ್ಚಗನ್ನಡದಲ್ಲಿ ಮಾತನಾಡುವ ಮೂಲಕ ಕನ್ನಡ ಭಾಷೆಯ ಪಾವಿತ್ರ್ಯವನ್ನು ಮೆರೆದ ವಿದ್ಯಾರ್ಥಿಗಳು ಕನ್ನಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು.
ತಾಲೂಕು ಕನ್ನಡ ಸಾಹಿತ್ಯ ವೇದಿಕೆ ಹಾಗೂ ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ನೆಲವಾಗಿಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಶಾಲೆಯ ಅಂಗಳದಲ್ಲಿ ಕವಿ-ಕಾವ್ಯ ಹಾಗೂ ಅಚ್ಚಗನ್ನಡ- ಸ್ವಚ್ಛ ಕನ್ನಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಭ್ರಷ್ಟಾಚಾರ, ಹೆಣ್ಣು ಮಕ್ಕಳ ಶೋಷಣೆ, ಜನಸಂಖ್ಯಾ ಸ್ಫೋಟ, ಅರಣ್ಯ ಸಂರಕ್ಷಣೆ ಮುಂತಾದ ವಿಷಯಗಳ ಕುರಿತು ಯಾವುದೇ ಅನ್ಯಭಾಷಾ ಪದಗಳನ್ನು ಬಳಸದೆ ಅಚ್ಚಗನ್ನಡದಲ್ಲಿ ಮಾತನಾಡಿ ಕನ್ನಡಾಭಿಮಾನವನ್ನು ತೋರಿದರು.
ಪೊಲೀಸ್ ವಿಶ್ವನಾಥ್ ಅವರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಾಡಿನ ರಕ್ಷಣೆಗಾಗಿ ನೇಣಿನ ಕುಣಿಕೆಗೆ ಕೊರಳೊಡ್ಡುವ ಸನ್ನಿವೇಶವನ್ನು ಮನೋಜ್ಞವಾಗಿ ಅಭಿನಯಿಸಿ ಎಲ್ಲರನ್ನು ಮಂತ್ರ ಮುಗ್ಧರನ್ನಾಗಿಸಿದರು. ನಂತರ ಜನಪದ ಗಾಯಕರಾದ ಸೀಕಲ್ ನರಸಿಂಹಪ್ಪ, ಸ್ವಾರಪ್ಪಲ್ಲಿ ಚಂದ್ರಶೇಖರ್ ಹಾಗೂ ಮಹೇಶ್ಕುಮಾರ್ ಅವರು ವಿವಿಧ ಜನಪದ ಗೀತೆಗಳನ್ನು ಹಾಡಿ ಸಭಿಕರ ಮನಗೆದ್ದರು. ಯುವ ಬರಹಗಾರ ಕೆ.ಎನ್. ಅಕ್ರಂಪಾಷಾ, ಹಲವು ಹಾಸ್ಯ ಚಟಾಕಿಗಳನ್ನು ಹಾರಿಸಿದರು.
ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಚುಟುಕು ಸಾಹಿತ್ಯ ಪರಿಷತ್ತಿನ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಎಂ.ಆರ್, ನಾಗರಾಜರಾವ್ ಮಾತನಾಡಿ, ಭಾವನೆಗಳನ್ನು ಸಾಹಿತ್ಯದೊಂದಿಗೆ ಬೆರೆಸಿ ಅಭಿವ್ಯಕ್ತಗೊಳಿಸಿದರೆ ಉತ್ಕೃಷ್ಟ ಸಾಹಿತ್ಯ ರಚನೆಯಾಗಬಲ್ಲದು ಎಂದರು.
ವೇದಿಕೆ ಅಧ್ಯಕ್ಷರಾದ ಕಾಗತಿ ವಿ. ವೆಂಕಟರತ್ನಂ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕನ್ನಡಾಭಿಮಾನ, ಕವಿ-ಕಾವ್ಯಗಳ ಪರಿಚಯ ಹಾಗೂ ಸಾಹಿತ್ಯದ ಮಹತ್ವ, ಓದುವ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ಸಾಹಿತ್ಯ ವೇದಿಕೆಯು ಮುಂದಾಗಿದ್ದು ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾತಕಲ್ಲಹಳ್ಳಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ಬಾಬು, ಸಾಹಿತಿ ನೆಲವಾಗಿಲು ಧನಪಾಲ, ಚಲಪತಿಗೌಡ, ಶ್ರೀಕಾಂತ್, ರಾಯಲ್ ಶಿ.ಮ. ಮಂಜುನಾಥ್, ರೂಪ, ಶಾಲೆಯ ಮುಖ್ಯ ಶಿಕ್ಷಕ ಎಸ್.ಎನ್. ಮಂಜುನಾಥ್, ಕಾರ್ಯದರ್ಶಿ ಕೆ.ಎಸ್. ನೂರುಲ್ಲಾ ಹಾಗೂ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

