ಕುರಿ ಕಳ್ಳತನ
ಚಿಂತಾಮಣಿ: ಚಿಕ್ಕಕರಕಮಾಕಲಹಳ್ಳಿ ಗ್ರಾಮದಲ್ಲಿ ಕಳ್ಳರ ಗುಂಪೊಂದು ಗ್ರಾಮದಲ್ಲಿನ ಕುರಿಗಳ ಹಟ್ಟಿಗೆ ನುಗ್ಗಿ ಸಾವಿರಾರು ರುಪಾಯಿ ಬೆಲೆ ಬಾಳುವ ಕುರಿಗಳನ್ನು ದೋಚಿ ಪರಾರಿಯಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ತಾಲೂಕಿನ ಮುರುಗಮಲ್ಲ ಹೋಬಳಿ ಚಿಕ್ಕಕರಕಮಾಕಲಹಳ್ಳಿ ಗ್ರಾಮದ ರೈತ ಶ್ರೀರಾಮಪ್ಪ ಎಂಬುವರಿಗೆ ಸೇರಿದ 2 ಕುರಿಗಳನ್ನು ಕಳ್ಳರ ಗುಂಪು ಮಂಗಳವಾರ ರಾತ್ರಿ ಕುರಿಗಳ ಹಟ್ಟಿಗೆ ನುಗ್ಗಿ ಕಳ್ಳತನ ಮಾಡಿರುವುದಾಗಿ ಮಾಲೀಕ ಪೊಲೀಸರಿಗೆ ದೂರು ನೀಡಿದ್ದಾರೆ. ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಕ್ತದಾನ ಶಿಬಿರ
ಗೌರಿಬಿದನೂರು: ಹೋಬಳಿ ಕೇಂದ್ರವಾದ ಮಂಚೇನಹಳ್ಳಿಯ ತೆಲುಗು ನಟ ಪವನ್ ಕಲ್ಯಾಣ್ ಹುಟ್ಟು ಹಬ್ಬದ ಪ್ರಯುಕ್ತ ಇಲ್ಲಿನ ಚಿರಂಜೀವಿ ಫ್ಯಾನ್ಸ್ ಅಸೋಸಿಯೇಷನ್ ವತಿಯಿಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ರಕ್ತದಾನ ಶಿಬಿರದಲ್ಲಿ ಸುಮಾರು 123 ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ರಕ್ತದಾನ ಮಾಡಿದವರಿಗೆ ನೆನಪಿನ ಕಾಣಿಕ ನೀಡಲಾಯಿತು. ಚಿರಂಜೀವಿ ಫ್ಯಾನ್ಸ್ ಅಸೋಸಿಯೇಷನ್ ಸಂಘದ ಅಧ್ಯಕ್ಷ ಮಂಜುನಾಥರಾವ್, ಪದಾಧಿಕಾರಿಗಳಾದ ಪೂರ್ಣಚಂದ್ರ, ಮುರಳಿ, ನಾಗೇಶ್, ರವಿ, ಸುರೇಶ್, ಲೋಕೇಶ್, ಅಶೋಕ್, ರಾಮಾಂಜಿ, ಫಯಾಜ್, ನಾಜೀರ್, ಚಿರಂಜೀವಿ ಅಭಿಮಾನಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

