ಕೋಲಾರ

ಸರಗಳ್ಳತನ ಪ್ರಕರಣ; ಒಬ್ಬ ಪೊಲೀಸ್ ವಶಕ್ಕೆ

Published On :

ಚಿಂತಾಮಣಿ: ಪೊಲೀಸರ ಸೋಗಿನಲ್ಲಿ ಬಂದು ವೃದ್ಧೆಯ ಲಕ್ಷಾಂತರ ರುಪಾಯಿ ಬೆಲೆಬಾಳುವ ಬಂಗಾರದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಘಟನೆ ವಿವರ: ಪಟ್ಟಣದ ವೆಂಕಟಗಿರಿಕೋಟೆ ಮೊದಲನೇ ಕ್ರಾಸ್ ಬಳಿ ಇರುವ ವೃದ್ಧೆ ನೀಲಮ್ಮ ಎಂಬಾಕೆ ಮೊಮ್ಮಗನ ಜೊತೆ ಕಳೆದ ಜು.25ರಂದು ಪಟ್ಟಣದ ಬಳಿ ಬಸ್‌ಗಾಗಿ ಕಾಯುತ್ತಿರುವಾಗ ಇಬ್ಬರು ಅಪರಿಚಿತರು ಕಪ್ಪು ಬಣ್ಣದ ದ್ವಿಚಕ್ರದಲ್ಲಿ ಬಂದು ಅಜ್ಜಿ ನಾವು ಪೊಲೀಸರು, ಮೊನ್ನೆ ಇಲ್ಲಿ ಕಳ್ಳತನವಾಗಿದೆ, ಈ ಕಡೆ ಕಳ್ಳರು ಹೆಚ್ಚಾಗಿದ್ದಾರೆ. ನಿಮ್ಮ ಕತ್ತಿನ ಸರ ಭದ್ರವಾಗಿ ಇಟ್ಟುಕೊಳ್ಳಿ ಎಂದು ನಂಬಿಸಿ ಕಳ್ಳತನ ಮಾಡಿದ್ದರು. ಮೊಮ್ಮಗ ನೀಡಿದ ಮಾಹಿತಿ ಮೇರೆಗೆ ಪೊಲೀಸರು ಚೊಕ್ಕರೆಡ್ಡಿಹಳ್ಳಿ ಗ್ರಾಮದ ವ್ಯಕ್ತಿನನ್ನು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.