ಕಡೆಗಣನೆ ಆರೋಪ: ಖಾಸಗಿ ಶಾಲಾ ಶಿಕ್ಷಕರಿಂದ ದಿನಾಚರಣೆ ಬಹಿಷ್ಕಾರ
ಬಂಗಾರಪೇಟೆ: ಖಾಸಗಿ ಶಾಲಾ ಶಿಕ್ಷಕರನ್ನು ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳದೆ ಕಡೆಗಣಿಸಲಾಗಿದೆ ಎಂದು ಆರೋಪಿಸಿ ಖಾಸಗಿ ಶಾಲಾ ಶಿಕ್ಷಕರು ತಾಲೂಕು ಆಡಳಿತ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆಯನ್ನು ಬಹಿಷ್ಕರಿಸಿದರು.
ಪಟ್ಟಣದಲ್ಲಿ ಪ್ರತಿ ವರ್ಷ ನಡೆಯುವ ಶಿಕ್ಷಕರ ದಿನಾಚರಣೆಯಲ್ಲಿ ಖಾಸಗಿ ಮತ್ತು ಸರ್ಕಾರಿ ಶಿಕ್ಷಕರು ಒಂದಾಗಿ ಅದ್ಧೂರಿಯಾಗಿ ಶಿಕ್ಷಕರ ದಿನಾಚರಣೆ ಮಾಡಿಕೊಂಡು ಬರುತ್ತಿದ್ದರು. ಆದರೆ ಈ ವರ್ಷ ತಾಲೂಕು ಆಡಳಿತವಾಗಲ ಅಥವಾ ಶಾಸಕರಾಗಲಿ ಖಾಸಗಿ ಶಾಲಾ ಶಿಕ್ಷಕರನ್ನು ಯಾವುದೇ ತೀರ್ಮಾನಕ್ಕೂ ವಿಶ್ವಾಸಕ್ಕೆ ಪಡೆಯದೆ ನಿರ್ಲಕ್ಷ್ಯ ಮಾಡುತ್ತಲೇ ಬರುತ್ತಿದ್ದರಿಂದ ಈ ಬೆಳವಣಿಗೆಯಿಂದ ನೊಂದ ಖಾಸಗಿ ಶಾಲಾ ಶಿಕ್ಷಕರ ಸಂಘ ಎಸ್.ಎನ್. ರೆಸಾರ್ಟ್ನಲ್ಲಿ ನಡೆದ ಶಿಕ್ಷಕರ ದಿನಾಚರಣೆಗೆ ಗೈರು ಹಾಜರಾಗುವ ಮೂಲಕ ತಮ್ಮ ಅಸಮಾಧಾನವನ್ನು ತೋರ್ಪಡಿಸಿದರು. ಇದರಿಂದ ಶಿಕ್ಷಕರಲ್ಲಿಯೂ ಎರಡು ಗುಂಪುಗಳಾದಂತಾಗಿದೆ. ಖಾಸಗಿ ಶಿಕ್ಷಕರು ಸಮಾರಂಭವನ್ನು ಬಹಿಷ್ಕಾರ ಮಾಡಿದರೂ ಯಾವೊಬ್ಬರು ಅವರ ಮನವೊಲಿಸಿ ಸಮಾರಂಭಕ್ಕೆ ಕರೆತರುವ ಗೋಜಿಗೆ ಹೋಗಿಲ್ಲ.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಶಿಕ್ಷಕರು ಮೆರವಣಿಗೆ ಮಾಡಿ ನಂತರ ಎಸ್.ಎನ್. ರೆಸಾರ್ಟ್ನಲ್ಲಿ ಆಯೋಜಿಸಿದ್ದ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಸ್.ಎನ್. ನಾರಾಯಣಸ್ವಾಮಿ ವಹಿಸಿದ್ದರು. ಕಾರ್ಯಕ್ರಮವನ್ನು ತಾಪಂ ಅಧ್ಯಕ್ಷೆ ರೇಣುಕಾಬಾಲಚಂದ್ರ ಉದ್ಘಾಟಿಸಿದರು. ಇದೇ ವೇಳೆ ನಿವೃತ್ತರಾದ 34ಶಿಕ್ಷಕರನ್ನು ಸನ್ಮಾನಿಸಲಾಯಿತು. ನಂತರ ಮಾತನಾಡಿದ ಬಹುತೇಕ ಶಿಕ್ಷಣ ಸಂಘಟನೆಗಳ ಮುಖಂಡರು ಪಟ್ಟಣದಲ್ಲಿ ಹಲವು ವರ್ಷಗಳಿಂದ ಗುರುಭವನವಿಲ್ಲದೆ ಶಿಕ್ಷಕರಿಗೆ ಭಾರಿ ಅನಾನುಕೂಲಗಳಾಗಿವೆ ಆದ್ದರಿಂದ ಮುಂದಿನ ವರ್ಷವಾದರೂ ಪಟ್ಟಣದಲ್ಲಿ ಗುರುಭವನ ನಿರ್ಮಾಣಕ್ಕೆ ಶಾಸಕರು ಸಹಕಾರ ನೀಡಬೇಕೆಂದು ಕೋರಿದರು.ನಂತರ ಮಾತನಾಡಿದ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪಾತ್ರ ಶಿಕ್ಷಕರ ಮೇಲಿದ್ದು ಶಿಕ್ಷಕರು ಮಕ್ಕಳನ್ನು ನಾಳಿನ ಉತ್ತಮ ಪ್ರಜೆಗಳನ್ನಾಗಿ ರೂಪಿಸುಲು ಹೆಚ್ಚಿನ ನಿಗಾವಹಿಸಬೇಕೆ ವಿನಃ ಶಿಕ್ಷಕರು ಇತರರಂತೆ ರಾಜಕೀಯ ಮಾಡಬಾರದು ಎಂದರಲ್ಲದೆ ಶಿಕ್ಷಕರ ಬಹು ವರ್ಷಗಳ ಕನಸಾಗಿರುವ ಗುರುಭವನ ಹಾಗೂ ನೌಕರರ ಭವನ ನಿರ್ಮಾಣಕ್ಕೆ ಒತ್ತು ಕೊಡುವುದಾಗಿ ಭರವಸೆ ನೀಡಿದರು.
ಈ ವೇಳೆ ತಾಪಂ ಅಧ್ಯಕ್ಷ ರೇಣುಕಾ, ಉಪಾಧ್ಯಕ್ಷ ಸಂಪಂಗಿರೆಡ್ಡಿ, ನೌಕರ ಸಂಘದ ಅಧ್ಯಕ್ಷ ಚಂದ್ರಶೇಖರಗೌಡ, ಶಿಕ್ಷಕರ ಸಂಘದ ಅಧ್ಯಕ್ಷ ಅಪ್ಪಾಜಿಗೌಡ, ಪುರಸಭೆ ಮಾಜಿ ಅಧ್ಯಕ್ಷ ಕೆ. ಚಂದ್ರಾರೆಡ್ಡಿ, ಬ್ಲಾಕ್ ಅಧ್ಯಕ್ಷ ಮಂಜುನಾಥ್, ಬಿಇಒ ಕೆ. ಜಯರಾಜ್, ಇಒ ಜಗದೀಶ್, ಎಪಿಎಂಸಿ ಅಧ್ಯಕ್ಷ ಬಿ.ವಿ. ಮಹೇಶ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

