ಧೂಮಪಾನ, ತಂಬಾಕು ನಿಷೇಧ ಕಾಯ್ದೆ ತರಬೇತಿ ಕಾರ್ಯಾಗಾರ
ಕೆಜಿಎಫ್: ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವುದನ್ನು, ತಂಬಾಕು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಲು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರೋಹಿಣಿ ಕಟೋಚ್ ಸೆಫಟ್ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಧೂಮಪಾನ ಮತ್ತು ತಂಬಾಕು ನಿಷೇಧ ಕಾಯ್ದೆಯ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವುದು ಮತ್ತು ತಂಬಾಕು ಸೇವಿಸುವುದನ್ನು ಈಗಾಗಲೇ ಸರ್ಕಾರವು ನಿಷೇಧಿಸಿರುವುದರಿಂದ ಈ ಕಾಯ್ದೆಯನ್ವಯ ಎಲ್ಲಾ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ತಂಬಾಕು ನಿಷೇಧ ಪ್ರಕರಣಗಳನ್ನು ದಾಖಲಿಸಬೇಕೆಂದು ಸೂಚನೆ ನೀಡಿದರು.
ಉಪರಕ್ಷಣಾಧಿಕಾರಿ ಎಚ್.ಪಿ. ರಾಜಣ್ಣ, ವೃತ್ತ ನಿರೀಕ್ಷಕರಾದ ಪುಟ್ಟಮಾದಯ್ಯ, ಟಿ.ಸಿ. ವೆಂಕಟೇಶ್, ಶಿವಕುಮಾರ್, ಸಿಎಸ್ಐಗಳಾದ ರಾಘವೇಂದ್ರ ಪ್ರಕಾಶ್, ಎಲ್.ಆಂಜಪ್ಪ, ರಂಗಸ್ವಾಮಯ್ಯ, ಮಧುಸೂದನ್, ಮಾರ್ಕಾಂಡಪ್ಪ, ಸುರೇಶ್, ಜಗದೀಶ್, ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

