ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಗ್ರಾಪಂ ಕಚೇರಿಗೆ ಮುತ್ತಿಗೆ
ಚಿಂತಾಮಣಿ: ಆನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಗ್ರಾಮಗಳಿಗೆ ಮೂಲ ಸೌಕರ್ಯಗಳು ಕಲ್ಪಿಸುವಲ್ಲಿ ಸ್ಥಳೀಯ ಅಧಿಕಾರಿಗಳು ಮತ್ತು ಆಡಳಿತ ಮಂಡಳಿಯ ಗ್ರಾಮ ಪಂಚಾಯ್ತಿ ಸದಸ್ಯರು ವಿಫಲಗೊಂಡಿದ್ದಾರೆಂದು ಆಗ್ರಹಿಸಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ತಾಲೂಕು ಶಾಖೆ ವತಿಯಿಂದ ಗುರುವಾರ ಪಂಚಾಯ್ತಿ ಕಚೇರಿಗೆ ಮುತ್ತಿಗೆ ಹಾಕಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತಾಲೂಕಿನ ಆನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮೂಡಚಿಂತಲಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಮೂಲ ಸೌಕರ್ಯಗಳು ಇಲ್ಲದೆ ಗ್ರಾಮಸ್ಥರಿಗೆ ಅನಾರೋಗ್ಯ ಮುಂತಾದ ತೊಂದರೆಗಳು ಹೆಚ್ಚಾಗುತ್ತಿದ್ದು,ಕುಡಿಯಲು ಸರಿಯಾಗಿ ನೀರಿಲ್ಲದೆ ಕಲುಷಿತ ನೀರು ಸರಬರಾಜುನಿಂದ ಗ್ರಾಮಸ್ಥರಿಗೆ ಡೆಂಗ್ಯೂ ವೈರಸ್ಜ್ವ್ರಗಳು ಹೆಚ್ಚಾಗಿ ಗ್ರಾಮಸ್ಥರುಗಳು ಅತಿ ತೊಂದರೆಗೆ ಈಡಾಗಿದ್ದು, ಇವುಗಳನ್ನು ಸರಿಪಡಿಸಲು ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗದೆ ಶೌಚಾಲಯ,ಕುಡಿಯುವ ನೀರು, ವಿದ್ಯುತ್, ರಸ್ತೆ, ಚರಂಡಿ ಸ್ವಚ್ಚತೆ ಮುಂತಾದವುಗಳ ಕೊರತೆಯಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗ ಬೀತಿ ಹೆಚ್ಚಾಗಿ ಗ್ರಾಮಪಂಚಾಯ್ತಿಗೆ ಇವುಗಳ ನಿವಾರಣೆಗಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಿಲ್ಲ ಕಾರಣಕ್ಕಾಗಿ ಇಂದು ನೂರಾರು ಮಹಿಳೆಯರು, ಸುತ್ತಮುತ್ತಲಿನ ಗ್ರಾಮಸ್ಥರು ಆನೂರು ಪಂಚಾಯ್ತಿಗೆ ಮಾದಿಗ ದಂಡೋರ ಹೋರಾಟ ಸಮಿತಿ ತಾಲೂಕು ಶಾಖಾ ಕಡೆಯಿಂದ ಬೀಗ ಜಡಿದು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹ: ಗ್ರಾಮ ಪಂಚಾಯ್ತಿ ಪಿಡಿಒ ಮತ್ತು ಆಡಳಿತದವರು ದಲಿತ ಕೇರಿಗಳಿಗೆ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸದೆ ಕಾಲಹರಣ ಮಾಡಿ ಮತ್ತು ನೈರ್ಮಲ್ಯ ಕಾಪಾಡಲು ವಿಫಲಗೊಂಡಿರುವುದರಿಂದ ಇಂದು ಏಕಾಏಕಿ ಖಾಲಿ ಕುಂಡಗಳನ್ನು ಹಿಡಿದು ಮಹಿಳೆಯರು ಮತ್ತು ಗ್ರಾಮಸ್ಥರು ಸೇರಿ 2 ಗಂಟೆಗೂ ಹೆಚ್ಚು ಕಾಲ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ತಮಟೆ ಬಡಿದು ಅಧಿಕಾರಿಗಳ ವಿರುದ್ಧ ದಿಕ್ಕಾರಗಳನ್ನು ಕೂಗುತ್ತಾ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಮಾತಿನ ಚಕಮಕಿ: ಮಾದಿಗ ದಂಡೋರ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿ ಜೆ.ಎಂ. ದೇವರಾಜ್ ಹಾಗೂ ಜಿಲ್ಲಾಧ್ಯಕ್ಷ ಎಂ.ವಿ. ರಾಮಪ್ಪ ಪ್ರತಿಭಟನೆಕಾರರನ್ನು ಉದ್ದೇಶಿಸಿ ಮಾತನಾಡುತ್ತಾ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದೆ ಜನಸಾಮಾನ್ಯರನ್ನು ವಿವಿಧ ಕೆಲಸಗಳಿಗೆ ಹಳ್ಳಿಯಿಂದ ಪಟ್ಟಣಕ್ಕೆ ಪರದಾಡಿಸುತ್ತಿರುವ ಪಂಚಾಯ್ತಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಕ್ರೋಶ ವ್ಯಕ್ತಪಡಿಸಿದರು.
ಸುದ್ದಿ ತಿಳಿದ ಘಟನಾ ಸ್ಥಳಕ್ಕೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ನರಸಿಂಹಮೂರ್ತಿ ಮತ್ತು ಪಿಡಿಒ ನಾಗೇಶ್ ಬಾಬು, ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೃಷ್ಣಪ್ಪ, ಜಿಲ್ಲಾ ಪಂಚಾಯ್ತಿಯ ಜೆ.ಇ. ವೆಂಕಟೇಶ್ ಪ್ರಸಾದ್ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸಮಾಧಾನಗೊಳಿಸಲು ಯತ್ನಿಸಿದಾಗ ಹಲವು ಸಮಯ ಮಾತಿನ ಚಕಮಕಿ ನಡೆದು ಪರಿಸ್ಥಿತಿ ಬಿಗುವಿನಿಂದ ಕೂಡಿತ್ತು. ನಂತರ ಮಧ್ಯ ಪ್ರವೇಶಿಸಿದ ಗ್ರಾಮಾಂತರ ಠಾಣೆಯ ಸಬ್ಇನ್ಸ್ಪೆಕ್ಟರ್ ರಾಘವೇಂದ್ರ ಶಾತಿಯುತವಾಗಿ ಸಮಸ್ಯೆಯನ್ನು ಬಗೆಹಿರಿಸಿಕೊಳ್ಳಲು ತಿಳಿಸಿದರು.
ನಂತರ ಪಂಚಾಯ್ತಿ ಕಚೇರಿಯಲ್ಲಿ ಪ್ರತಿಭಟನಾಕಾರರ ಜೊತೆ ಅಧಿಕಾರಿಗಳು 1 ಗಂಟೆ ಕಾಲ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ನರಸಿಂಹಮೂರ್ತಿ ಮಾತನಾಡುತ್ತಾ 1 ವಾರದೊಳಗೆ ಸಮಸ್ಯೆಗಳನ್ನು ಬಗೆಹರಿಸಲು ಶೀಘ್ರ ಕ್ರಮ ಕೈಗೊಳ್ಳುತ್ತೇವೆಂದು ಭರವಸೆ ನೀಡಿದರು.
ತಾಲೂಕು ಅಧ್ಯಕ್ಷರಾದ ಗುರುಪ್ರಸಾದ್, ಉಪಾಧ್ಯಕ್ಷ ಆನೂರು ಶ್ರೀನಿವಾಸ್, ಮುಖಂಡರಾದ ನಲ್ಲಪ್ಪ, ಆಂಜಪ್ಪ, ತಿರುಮಲಪ್ಪ, ನಾನಪ್ಪ, ನಾರಾಯಣಸ್ವಾಮಿ, ಕದಿರಪ್ಪ, ವೆಂಕಟಮ್ಮ, ನಾಗರತ್ನ, ಮುನಿವೆಂಕಟಮ್ಮ ಸೇರಿದಂತೆ ಇನ್ನೂ ಗ್ರಾಮಸ್ಥರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

