ಕೋಲಾರ

'ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ'

Published On :

ಚಿಂತಾಮಣಿ: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರ್ತಿಸಿ ಅವರನ್ನು ಇನ್ನಷ್ಟು ಪ್ರೋತ್ಸಾಹ ನೀಡಿದ್ದಲ್ಲಿ ಹೆಚ್ಚು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವೆಂದು ಪ್ರಾಂಶುಪಾಲ ಎ. ನಾರಾಯಣಸ್ವಾಮಿ ಕರೆ ನೀಡಿದರು.
ಪಟ್ಟಣದಲ್ಲಿನ ಪಿಟೀಲ್ ಲೇಔಟ್ ಬಳಿ ಇರುವ ಚೇತನ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ಉಪನ್ಯಾಸಕರಿಗೆ ಸ್ವಾಗತ ಹಾಗೂ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಬಗ್ಗೆ ಆಧ್ಯತೆ ನೀಡಿದಾಗ ಮಾತ್ರ ಸಮಾಜದಲ್ಲಿ ಉನ್ನತ ಸ್ಥಾನಗಳಲ್ಲಿ ಪಡೆಯಲು ಸಾಧ್ಯವೆಂದು ಕಾರ್ಯಕ್ರಮದಲ್ಲಿ ವಿವರಿಸಿದರು.  ನಂತರ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಕಾಳಪ್ಪ ಮಾತನಾಡುತ್ತಾ ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆದು ಹುಮ್ಮಸ್ಸಿನಿಂದ ಶಿಕ್ಷಣ ರಂಗದಲ್ಲಿ ಉತ್ತಮ ಸ್ಥಾನಗಳನ್ನು ಅಲಂಕರಿಸಲು ಇಂತಹ ವೇದಿಕೆಗಳು ಬಹಳ ಮಹತ್ವದ ಪಾತ್ರಗಳನ್ನು ವಹಿಸಲಿವೆಯೆಂದು ನುಡಿದರು.
ಕಾರ್ಯಕ್ರಮಕ್ಕೂ ಮುನ್ನ ದ್ವತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮತ್ತು ಹೊಸದಾಗಿ ವರ್ಗಾವಣೆಗೊಂಡ ಉಪನ್ಯಾಸಕರಿಗೂ ಸ್ವಾಗತ ಮತ್ತು ಬೇರೆ ಸ್ಥಳಗಳಿಗೆ ಉಪನ್ಯಾಸಕರಿಗೂ ಸನ್ಮಾನಿಸಲಾಯಿತು. ಈ ಸಭೆಯಲ್ಲಿ ಉಪನ್ಯಾಸಕರು ತಾವು ಸಲ್ಲಿಸಿದ ಸೇವೆಯ ಅನುಭವಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ವಿವಿಧ ಕಾಲೇಜಿನ ಪ್ರಾಂಶುಪಾಲರಾದ ಎಸ್. ಜನಾರ್ದನ್,ನಟರಾಜ್, ಕಮಲಾಕುಮಾರಿ, ಮೊಹಮದ್ ಕಾಸೀಮ್, ಮಾಜಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ನಾರಾಯಣರೆಡ್ಡಿ, ಮುಖ್ಯ ಶಿಕ್ಷಕ ಕೆ.ಎನ್. ರಮಣಾರೆಡ್ಡಿ,   ವಿದ್ಯಾರ್ಥಿಗಳು, ಪೋಷಕರು  ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.