ಕೋಲಾರ

15 ರಂದು ಪತ್ರಕರ್ತರ ಸಹಕಾರ ಸಂಘದ ಚುನಾವಣೆ

Published On :

ಕೋಲಾರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿದೋದ್ದೇಶ ಸಹಕಾರ ಸಂಘ ನಿಯಮಿತದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯನ್ನು ಸೆ. 15 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಕೋಲಾರದ ಅಂತರಗಂಗೆ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ನಡೆಸಲಾಗುವುದು ಎಂದು ಸಂಘದ ಚುನಾವಣಾಧಿಕಾರಿ ಎಂ.ಐ. ಅಬೀದ್ ಹುಸೇನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಂಘದ ಒಟ್ಟು 17 ಸ್ಥಾನಗಳ ಪೈಕಿ 13 ಸ್ಥಾನಗಳನ್ನು ಸಾಮಾನ್ಯ ವರ್ಗಕ್ಕೂ, ತಲಾ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಕ್ಕೂ ಹಾಗೂ 2 ಸ್ಥಾನಗಳನ್ನು ಮಹಿಳಾ ಸ್ಥಾನಗಳಾಗಿ ಮೀಸಲಾಗಿಟ್ಟಿದೆ.ಕೋಲಾರ ಪತ್ರಕರ್ತರ ಭವನದಲ್ಲಿ ನಾಮಪತ್ರ ಸಲ್ಲಿಸಲು ಕೊನೆ ದಿನಾಂಕ ಸೆ.9 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆವರೆಗೆ, ನಾಮಪತ್ರಗಳ ಪರಿಶೀಲನೆ  ನಾಮಪತ್ರಗಳನ್ನು ವಾಪಸ್ ಪಡೆಯಲು ಸೆ.11ರಂದು ಮಧ್ಯಾಹ್ನ 3 ಗಂಟೆವರೆಗೆ, ಅದೇ ದಿನ ಕ್ರಮಬದ್ಧ ನಾಮಪತ್ರಗಳ ಪ್ರಕಟಣೆ ಮಧ್ಯಾಹ್ನ 3 ರ ನಂತರ, ಸೆ.15 ರಂದು ಮತದಾನ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆವರೆಗೆ ನಡೆಯುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.