ಕೋಲಾರ

ಕ್ರೀಡಾಕೂಟದಲ್ಲಿ ಟೇಕಲ್ ಸಾಧನೆ

Published On :

ಟೇಕಲ್: ಟೇಕಲ್ನ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2013-14ನೇ ಶೈಕ್ಷಣಿಕ ವರ್ಷದಲ್ಲಿ ಮಾಲೂರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 3 ಪ್ರಥಮ ಸ್ಥಾನ, 1 ತೃತೀಯ ಹಾಗೂ 1 ಸಮಾಧಾನ ಬಹುಮಾನ ಬಂದಿರುತ್ತದೆ.ಮಾಲೂರಿನ ಜೆಎಸ್ಎಸ್ ಕಾಲೇಜು ಆವರಣದಲ್ಲಿ ಏರ್ಪಡಿಸಿರುವ ಕ್ರೀಡಾ ಸ್ಪರ್ಧೆಗಳಲ್ಲಿ ಟೇಕಲ್ನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯ ಸಿ.ಎ. ರತ್ನ 400 ಮೀ. ಓಟದಲ್ಲಿ ಪ್ರಥಮ, ದ್ವಿತೀಯ ಪಿಯುಸಿಯ ಡಿ. ವೆಂಕಟೇಶ್ 400 ಮೀ. ಓಟದಲ್ಲಿ ಪ್ರಥಮ, ದ್ವಿತೀಯ ಪಿಯುಸಿಯ ವಿ. ಹರೀಶ್ ಐ ಜಂಪಿಂಗ್(ಎತ್ತರ ಜಿಗಿತ) ಪ್ರಥಮ, ಪ್ರಥಮ ಪಿಯುಸಿಯ ಮೊಹಮ್ಮದ್ ಆಜಾಂ ಉದ್ದ ಜಿಗಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದು, ಕಬಡ್ಡಿ ಪಂದ್ಯಾವಳಿಯಲ್ಲಿ ಬಾಲಕಿಯರು ರನ್ನರ್ಸ್ಬ್ಹುಮಾನ ಪಡೆದಿರುತ್ತಾರೆ. ಈ ನಿಟ್ಟಿನಲ್ಲಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ಎ.ಕೆ. ಪಾಪಣ್ಣ ಅವರು ಅಭಿನಂದಿಸಿದ್ದಾರೆ.
ಗ್ರಾಮ ದೇವತೆ ವಾರ್ಷಿಕೋತ್ಸವ
ಕೋಲಾರ: ಹೊರವಲಯದ ಖಾದ್ರಿಪುರ ಗ್ರಾಮದಲ್ಲಿ ಗ್ರಾಮ ದೇವತೆ ಸವಾರಮ್ಮ ದೇವಾಲಯದ 105 ನೇ ವಾರ್ಷಿಕೋತ್ಸವ, ದೀಪೋತ್ಸವ ಹಮ್ಮಿಕೊಳ್ಳಲಾಗಿದೆ.
ಶುಕ್ರವಾರ ದೇವರ ಮೇರವಣಿಗೆ ಮತ್ತು ಭಜನೆ ಮಂಡಳಿಯವರಿಂದ ದೇವರ ಕೀರ್ತನೆಗಳು ಹಾಗೂ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಶನಿವಾರ ಸವಾರಮ್ಮ ದೇವಿಗೆ ವಿಶೇಷ ಹೂವಿನ ಅಲಂಕಾರ ಮತ್ತು ದೀಪೋತ್ಸವ ಹಾಗೂ ಮಹಾಮಂಗಳಾರತಿ ಹಾಗೂ ಪ್ರಸಾದವಿನಿಯೋಗ ಹಮ್ಮಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.