ಸ್ಮಶಾನ ರಸ್ತೆ ಡಾಂಬರೀಕರಣಕ್ಕೆ ಚಾಲನೆ
ಕನ್ನಡಪ್ರಭ ವಾರ್ತೆ, ಕೋಲಾರ, ಸೆ.6
ನಗರದ ಟೇಕಲ್ ಮುಖ್ಯ ರಸ್ತೆಯಿಂದ ಆಗ್ರೋ ಕಚೇರಿ ಹಿಂಭಾಗದ ಸಾರ್ವಜನಿಕ ಸ್ಮಶಾನದ ರಸ್ತೆ ಡಾಂಬರೀಕರಣಕ್ಕೆ ನಗರಸಭೆ ಸದಸ್ಯ ಮುರಳೀಗೌಡ ಚಾಲನೆ ನೀಡಿದರು.
2012-13ನೇ ಸಾಲಿನ ಎಸ್ಎಫ್ಸಿ ಅನುದಾನದಲ್ಲಿ ಜಯನಗರ, ಪಿಸಿ ಬಡಾವಣೆ ಕಠಾರಿಪಾಳ್ಯ ಮತ್ತಿತರ ಬಡಾವಣೆಗಳ ಜನತೆಯ ಬಹುದಿನಗಳ ಬೇಡಿಕೆಯಂತೆ ಈ ರಸ್ತೆಗೆ ಡಾಂಬರೀಕರಣ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ನಗರಸಭಾ ಸದಸ್ಯ ಮುರಳೀಗೌಡ, ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿ, ಜಯನಗರದ 14 ನೇ ವಾರ್ಡ್ನಲ್ಲಿ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
ಶೀಘ್ರದಲ್ಲೇ ನಗರೋತ್ಥಾನದಡಿ ಕಾಮಗಾರಿಗಳು ಆರಂಭಗೊಳ್ಳಲಿದ್ದು, ಉಳಿದಿರುವ ರಸ್ತೆಗಳಿಗೆ ಡಾಂಬರು ಇಲ್ಲವೇ ಕಾಂಕ್ರೀಟ್ ಹಾಕುವ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು.
ಜಯನಗರ ಬಡಾವಣೆಯಲ್ಲಿ ನೀರಿನ ಸಮಸ್ಯೆ ಇರುವುದು ನಿಜವಾಗಿದ್ದು, ಇದೀಗ ಕೋಲಾರಮ್ಮ ಕೆರೆಯಲ್ಲಿ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ನೀಡುವುದು ನಿಧಾನವಾಗಿದ್ದು, ಅದು ಮುಗಿದ ಕೂಡಲೇ ಈ ಭಾಗದ ನೀರಿನ ಸಮಸ್ಯೆ ಪರಿಹಾರಗೊಳ್ಳಲಿದೆ ಎಂದರು.
ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರ ಗರುಡಾಚಲಮೂರ್ತಿ, ಜೆಇ ಮೋಹನ್, ಗುತ್ತಿಗೆದಾರ ಕೆಂಬೋಡಿ ಶ್ರೀನಿವಾಸ್ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

