ಕೋಲಾರ

ಪಡಿತರ ಅವ್ಯವಸ್ಥೆ ಆಗರ: ದಸಂಸ ಮನವಿ

Published On :

ಮಾಲೂರು: ತಾಲೂಕಿನಾದ್ಯಂತ ಅವ್ಯವಸ್ಥೆಯ ಆಗರವಾಗಿರುವ ಪಡಿತರ ವ್ಯವಸ್ಥೆಯನ್ನು ಸರಿಪಡಿಸಿ, ಜನತೆ ಒಳಗಾಗುತ್ತಿರುವ ಶೋಷಣೆಯನ್ನು ತಪ್ಪಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯು ತಹಸೀಲ್ದಾರ್ ಅವರನ್ನು ಮನವಿ ಮೂಲಕ ಒತ್ತಾಯಿಸಿದೆ.
ಈ ಸಂಬಂಧ ಶನಿವಾರದಂದು ತಹಸೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ದಲಿತ ಸಂರ್ಘಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಚವ್ವನೇಹಳ್ಳಿ ಕೆ. ವಿಜಿ ಹಾಗೂ ತಾಲೂಕು ಸಂಚಾಲಕ ಎಸ್.ಎಂ.ವೆಂಕಟೇಶ್ ರವರು ತಮ್ಮ ಕಾರ್ಯಕರ್ತರೂಡನೆ ತಹಸೀಲ್ದಾರ್ ಡಾ. ಸುಧಾ ಅವರಿಗೆ ಮನವಿ ಸಲ್ಲಿಸಿ ಮಾತನಾಡುತ್ತಾ, ಪಡಿತರ ಚೀಟಿ ವಿತರಣೆಯಲ್ಲೇ ಅಕ್ರಮ ನಡೆದಿದ್ದು, ಉಳ್ಳವರಿಗೆ ಬಿಪಿಎಲ್ ಕಾರ್ಡ್ ವಿತರಿಸಲಾಗಿದೆ.ನ್ಯಾಯ ಬೆಲೆ ಅಂಗಡಿಗಳಲ್ಲಿ ನಿಗದಿತ ಬೆಲೆಗಳಕ್ಕಿಂತ ಹೆಚ್ಚಾಗಿ ವಸೂಲಿ ಮಾಡಲಾಗುತ್ತಿದೆ ರ್ಂದು ಆರೋಪಿಸಿದರು.
ಪಡಿತರ ವಿತರಿಸುವ ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಭೆ ಕರೆದು ಚರ್ಚಿಸಿ ನ್ಯಾಯಯುತವಾಗಿ ಪಡಿತರ ವಿರತಣೆ ಮಾಡುವ ವ್ಯವಸ್ಥೆ ಮಾಡಬೇಕೆಂದು ಅಗ್ರಹಿಸಿದರು.ಇದಲ್ಲದೇ ತಹಸೀಲ್ದಾರ್ ಕಚೇರಿಯಲ್ಲಿ ಆದಾಯ ಹಾಗೂ ಜಾತಿ ಪ್ರಮಾಣ ಪತ್ರ ನೀಡಲು ವಿಳಂಬವಾಗುತ್ತಿದ್ದು, ಈ ಬಗ್ಗೆನ್ನೂ ಗಮನ ಹರಿಸಬೇಕೆಂದು ತಹಸೀಲ್ದಾರ್ ರವರನ್ನು ಒತ್ತಾಯಿಸಿದರು. ಬೇಗ ನ್ಯಾಯಬೆಲೆ ಅಂಗಡಿ ಮಾಲೀಕರ ಸಭೆ ಕರೆದು ಪಡಿತರರ  ಸಮಸ್ಯೆ ಬಗೆ ಹರಿಸದೆ ಹೋದರೆ ಸಂಘಟನೆಯ ಮೂಲಕ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. ಮೈಲಾಂಡ ಹಳ್ಳಿ ಮುನಿಯಪ್ಪ, ಉಪವಾಸಪುರ ಆನಂದ್, ಅರಸನಹಳ್ಳಿ ಶಂಕರ್, ಕಡವನಹಳ್ಳಿ ನಾರಾಯಣಸ್ವಾಮಿ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.