ಶಿಕ್ಷಕರು ವೃತ್ತಿ ಪಾವಿತ್ರ್ಯ ಉಳಿಸಿಕೊಳ್ಳಲಿ
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಸೆ.8
ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಹೊಂದಿರುವ ಶಿಕ್ಷಕರು ತಮ್ಮ ಸ್ಥಾನಕ್ಕೆ ಕಳಂಕ ಬಾರದಂತೆ ನೋಡಿಕೊಳ್ಳಬೇಕು. ಪ್ರಾವಿತ್ರ್ಯತೆ ಉಳಿಸಿಕೊಂಡು ಹೋಗಬೇಕೆಂದು ಚಿಕ್ಕಬಳ್ಳಾಪುರ ಲಯನ್ಸ್ ಸಂಸ್ಥೆ ಅಧ್ಯಕ್ಷ, ಎಸ್.ಬಿ.ಎಂ. ಮುದ್ದೇನಹಳ್ಳಿ ಶಾಖೆ ವ್ಯವಸ್ಥಾಪಕರೂ ಆಗಿರುವ ಸುನೀಲ್ ಹೇಳಿದರು.
ತಾಲೂಕಿನ ಮುದ್ದೇನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಅವರ ನಿವಾಸದ ಆವರಣದಲ್ಲಿ ಲಯನ್ಸ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಅತ್ಯುತ್ತಮ ಪರಿಸರ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.
ಭಾವಿ ಪ್ರಜೆಗಳನ್ನು ರೂಪಿಸುವ ಶಿಕ್ಷಕರು ಈ ಸಮಾಜದ ಎರಡು ಕಣ್ಣುಗಳು. ಶಿಕ್ಷಕರು ಸರಿ ದಾರಿಯಲ್ಲಿ ನಡೆಯುತ್ತ ಮಕ್ಕಳನ್ನು ತಿದ್ದಿ ತೀಡಬೇಕೆಂದರು. ಸಾಧಕರನ್ನು ಗೌರವಿಸಿ ಅವರನ್ನು ಸತ್ಕಾರ ಮಾಡಿದಾಗ ಇನ್ನಷ್ಟು ಸಾಧನೆ ಮಾಡಲು ಪ್ರೋತ್ಸಾಹ ದೊರೆಯುತ್ತದೆ ಎಂದರು.
ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಎನ್. ಬ್ರಹ್ಮಚಾರಿ ಮಾತನಾಡಿ, ಲಯನ್ಸ್ ಸಂಸ್ಥೆಯ ಪ್ರತಿವರ್ಷ ಸಮುದಾಯದ ಒಳಿತಿಗಾಗಿ ನಾನಾ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಅದರ ಭಾಗವಾಗಿ ಶಿಕ್ಷಕರ ದಿನಾಚರಣೆಯನ್ನು ಪ್ರತಿ ವರ್ಷದಂತೆ ಪ್ರಸಕ್ತ ಸಾಲಿನಲ್ಲಿಯೂ ಹಮ್ಮಿಕೊಂಡಿದ್ದು, ಈ ಬಾರಿಯ ಶಿಕ್ಷಕರ ದಿನಾಚರಣೆಯಲ್ಲಿ ವಿಶೇಷವಾಗಿ ಪರಿಸರದ ಬಗ್ಗೆ ಕಾಳಜಿಯುಳ್ಳ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ವೆಂಕಟೇಶ್ ಅವರನ್ನು ಸನ್ಮಾನಿಸುತ್ತಿರುವುದು ಶ್ಲಾಘನೀಯ ಎಂದರು.
ಬಚ್ಚಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ದತ್ತಿಗೆ ಪಡೆದಿದ್ದು, ಶಾಲೆಗೆ ಮತ್ತು ಶಾಲಾ ಮಕ್ಕಳಿಗೆ ಬೇಕಾದ ಶಿಕ್ಷಣ ಪರಿಕರ ಸೇರಿದಂತೆ ಇನ್ನಿತರ ಸೌಲಭ್ಯವನ್ನು ಲಯನ್ಸ್ ಸಂಸ್ಥೆಯಿಂದ ಒದಗಿಸಲಾಗುವುದೆಂದರು.
ಇದೇ ಸಂದರ್ಭದಲ್ಲಿ ಜಿಲ್ಲಾಮಟ್ಟದ ಹಾಗೂ ರಾಜ್ಯ ಮಟ್ಟದ ಉತ್ತಮ ಪರಿಸರ ಮಿತ್ರ- 2011, ಮತ್ತು 2012 ಹಾಗೂ ವೈಯಕ್ತಿಕ ಸಾಧನೆ ಪ್ರಶಸ್ತಿ ಪಡೆದುಕೊಂಡ ಬಚ್ಚಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಿ.ವೆಂಕಟೇಶ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳ, ಸದಸ್ಯರಾದ ತುಳಸಿ, ನಂದಿತಾ, ಭಾರತಿಮೂರ್ತಿ, ಕ್ಲಸ್ಟರ್ ಸಂಯೋಜಕ ಎಂ.ಆರ್. ಸುಬ್ಬಾರೆಡ್ಡಿ, ಭದ್ರಾಚಲಂ, ಎಸ್ಬಿಎಂನ ಪ್ರಮೋದ್ಕುಮಾರ್, ಮಹದೇವ್, ಮಂಜುನಾಥ್, ಶೇಷಾದ್ರಿ ಸೇರಿದಂತೆ ಇನ್ನಿತರ ಪ್ರಮುಖರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

